'ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದರು'

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ.
ರಾಮಕೃಷ್ಣ ಹೆಗಡೆ ಮತ್ತು ಎಚ್.ಡಿ ದೇವೇಗೌಡ
ರಾಮಕೃಷ್ಣ ಹೆಗಡೆ ಮತ್ತು ಎಚ್.ಡಿ ದೇವೇಗೌಡ

ಗೋಕರ್ಣ/ ಹಾಸನ: ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ರಾಜಕೀಯ ಗೊತ್ತಿಲ್ಲದ ನಳಿನ್‌ ಕುಮಾರ್‌ ಕಟೀಲ್‌ಗೆ ತಿಳುವಳಿಕೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಎಚ್‌.ಡಿ ಕುಮಾರಸ್ವಾಮಿ ಬ್ರಾಹ್ಮಣ ವಿರೋಧಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿಕೆಗೆ ತಿರುಗೇಟು ನೀಡಿದರು.

ಕಟೀಲ್ ಬದಲು ಪಿಟೀಲ್‌ ಅಂತ ಹೆಸರು ಇಟ್ಟಿಕೊಳ್ಳುವುದು ಒಳ್ಳೆಯದು, ನಾವು ಎಷ್ಟು ಸ್ಥಾನ ಗೆಲ್ಲುತ್ತೇವೆ ಎನ್ನುವುದು ಜನರು ನಿರ್ಧರಿಸುತ್ತಾರೆ. ಬಿಜೆಪಿ ನಾಯಕರು ನಿರ್ಧರಿಸುವುದಲ್ಲ ಎಂದು ತಿರುಗೇಟು ಕೊಟ್ಟರು. ಹಿಂದೂ ಧರ್ಮ ರಕ್ಷಣೆ ನಾವು ಮಾಡುತ್ತೇವೆ. ಹಿಂದೂ ಧರ್ಮದ ಹೆಸರಿನಲ್ಲಿ ಅಧಿಕಾರ ಬಂದವರು ಏನು ಮಾಡಿದ್ದಾರೆ ಎನ್ನುವುದು ತಿಳಿದಿದೆ ಎಂದರು.

ಬ್ರಾಹ್ಮಣ ಸಮುದಾಯಕ್ಕೆ ನಾನು ಸಿಎಂ ಆದಾಗ ಬೆಂಗಳೂರಿನಲ್ಲಿ ಸಮುದಾಯ ಭವನಕ್ಕೆ ಜಾಗ ಕೊಟ್ಟೆ. ಬ್ರಾಹ್ಮಣ ಪ್ರಾಧಿಕಾರ ರಚನೆ ಮಾಡಿದೆ. ಬಿಜೆಪಿ ಏನು ಮಾಡಿದೆ ಎಂದು ಬ್ರಾಹ್ಮಣ ಸಮುದಾಯಕ್ಕೆ ಹೇಳಿ. ನಮಗೆ ಸಾವರ್ಕರ್ ಸಂಸ್ಕೃತಿ‌‌ ಬೇಡ. ಸರ್ವೆ ಜನ ಸುಖಿನೋಭವ ಅನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಹೇಳಿದರು.

ಬ್ರಾಹ್ಮಣರ ವಿರುದ್ಧ ಹೆಚ್‌ಡಿಕೆ  ನೀಡಿರುವ ಹೇಳಿಕೆಯನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಖಂಡಿಸಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜಾತಿ, ಪಕ್ಷ ಭೇದ ಮರೆತು ಯಾವುದೇ ಶಾಸಕರು ಬಹುಮತವಿದ್ದರೆ ಸಿಎಂ ಆಗಬಹುದು. ಇದರ ಅರಿವಿದ್ದರೂ ಜೆಡಿಎಸ್ ಮುಖಂಡರ ಹೇಳಿಕೆ ಆಯಾ ಸಮುದಾಯದವರ ಭಾವನೆಗೆ ಧಕ್ಕೆ ತಂದಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com