ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಗುತ್ತಿಗೆ ಪಡೆದಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆ ಪಡೆದಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಸೋಮವಾರ ಆರೋಪಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
Updated on

ಬೆಳಗಾವಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆ ಪಡೆದಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಸೋಮವಾರ ಆರೋಪಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ತಡಸೂರು ಗ್ರಾಮದಲ್ಲಿ ‘ಪಂಚರತ್ನ ರಥಯಾತ್ರೆ’ಗೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘2008ರಲ್ಲಿ ‘ಆಪರೇಷನ್ ಕಮಲ’ದ ಗುತ್ತಿಗೆಯನ್ನು ಸಿದ್ದರಾಮಯ್ಯ ಪಡೆದಿದ್ದು, ಒಪ್ಪಂದದ ಮೊತ್ತವೆಷ್ಟು ಎಂದು ನಾನು ಹಲವು ಬಾರಿ ಅವರನ್ನು ಕೇಳಿದ್ದೇನೆ. ಆದರೆ, ಅವರು ಇಲ್ಲಿಯವರೆಗೆ ಉತ್ತರ ನೀಡಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನೇ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ, ವಾಸ್ತವಿಕವಾಗಿ ಸಿದ್ದರಾಮಯ್ಯನವರೇ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಗುತ್ತಿಗೆ ಪಡೆದುಕೊಂಡಿದ್ದಾರೆಂದು ಹೇಳಿದರು.

ಇದೇ ವೇಳೆ ಈ ಬಾರಿ ಕಾಂಗ್ರೆಸ್‌ ಪತನವಾಗುವುದು ಖಚಿತ ಎಂದ ಅವರು. ಸಿದ್ದರಾಮಯ್ಯ ಮನೆಗೆ ಹೋಗುವ ಸಮಯ ಬಂದಿದೆ. ಜೆಡಿಎಸ್ ಬಗ್ಗೆ ಹೆಚ್ಚು ಮಾತನಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಬಿಎಸ್ ಯಡಿಯೂರಪ್ಪ ಅತಿಯಾದ ಆತ್ಮವಿಶ್ವಾಸದಲ್ಲಿದ್ದಾರೆಂದು ತಿಳಿಸಿದರು.

ಜನರ ವಿಶ್ವಾಸ ಗಳಿಸಿ ಯಾವುದೇ ಸಮುದಾಯದ ವ್ಯಕ್ತಿ ಮುಖ್ಯಮಂತ್ರಿಯಾಗಬಹುದು ಎಂಬ ಹಕ್ಕು ನಮ್ಮ ಸಂವಿಧಾನದಲ್ಲಿದೆ. ಚನ್ನರಾಯಪಟ್ಟಣ ಕ್ಷೇತ್ರದಿಂದ ನನ್ನ ವಿರುದ್ಧ ಯಾರು ಬೇಕಾದರೂ ಸ್ಪರ್ಧಿಸಬಹುದು ಆದರೆ ಯಾರನ್ನು ಆಯ್ಕೆ ಮಾಡಬೇಕೆಂದು ಜನರೇ ನಿರ್ಧರಿಸುತ್ತಾರೆ, ನನಗೆ ನಂಬಿಕೆ ಇದೆ. ಜನರು ನನ್ನನ್ನು ಆಯ್ಕೆ ಮಾಡುತ್ತಾರೆಂದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 1994 ರ ಚುನಾವಣೆಯಂತೆ ಜನರು ನಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ. ನಮ್ಮ ಸಾಲ ಮನ್ನಾ ಕಾರ್ಯಕ್ರಮದಿಂದ ಬೆಳಗಾವಿಯ ಹೆಚ್ಚಿನ ಸಂಖ್ಯೆಯ ರೈತರು ಪ್ರಯೋಜನ ಪಡೆದಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com