ನಿಮ್ಮ ಹಗಲುಗನಸು ನನಸಾಗಲು ಇದು ಬಿಹಾರ, ಉತ್ತರ ಪ್ರದೇಶವಲ್ಲ: ಅಮಿತ್ ಶಾಗೆ ಕುಮಾರಸ್ವಾಮಿ ವಾರ್ನಿಂಗ್

ಅಧಿಕಾರ ಸಿಕ್ಕಾಗ ರಾಜ್ಯದ ಜನರು ಮತ್ತು ರೈತರ ಪರವಾಗಿ ಜೆಡಿಎಸ್‌ ಧ್ವನಿ ಎತ್ತಿದೆ. ಆದರೆ ಎಂದಿಗೂ ಬಿಜೆಪಿಯವರಂತೆ ಎಂದೂ ನರಹತ್ಯೆಯ ರಾಜಕೀಯ ಮಾಡಿಲ್ಲ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಅಮಿತ್ ಶಾ ಮತ್ತು ಎಚ್.ಡಿ ಕುಮಾರಸ್ವಾಮಿ
ಅಮಿತ್ ಶಾ ಮತ್ತು ಎಚ್.ಡಿ ಕುಮಾರಸ್ವಾಮಿ
Updated on

ಧಾರವಾಡ: ಅಧಿಕಾರ ಸಿಕ್ಕಾಗ ರಾಜ್ಯದ ಜನರು ಮತ್ತು ರೈತರ ಪರವಾಗಿ ಜೆಡಿಎಸ್‌ ಧ್ವನಿ ಎತ್ತಿದೆ. ಆದರೆ ಎಂದಿಗೂ ಬಿಜೆಪಿಯವರಂತೆ ಎಂದೂ ನರಹತ್ಯೆಯ ರಾಜಕೀಯ ಮಾಡಿಲ್ಲ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕಾಗ ರೈತರ ಸಾಲ ಮನ್ನಾ ಮಾಡಿದ್ದೇವೆ. ಪ್ರಾಮಾಣಿಕವಾಗಿ ಜನಗಳ ನೋವಿಗೆ ಸ್ಪಂದಿಸುವ ಕೆಲಸ ಮಾಡಿದ್ದೇವೆ. ಆದರೆ ಬಿಜೆಪಿ ನಾಯಕರಂತೆ ಅಮಾಯಕರನ್ನು ಬಲಿ ಪಡೆದು ರಾಜಕೀಯ ಮಾಡಿಲ್ಲ. ಹೀಗಾಗಿ ರಾಜ್ಯ ಹಾಗೂ ದೇಶದಲ್ಲಿ ಜನರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಿ ಎಂದರು.

ಭಾರತದ ಸಂವಿಧಾನದಲ್ಲಿ ಯಾರು ಯಾವ ವೃತ್ತಿಯಾದರೂ ಆರಿಸಿಕೊಳ್ಳಬಹುದು. ಚುನಾವಣೆ ಬಂದಾಗ ಯಾರಾದರೂ ನಿಲ್ಲಬಹುದು. ಸಂವಿಧಾನದ ವ್ಯವಸ್ಥೆ ಬಗ್ಗೆ ಅಮಿತ್ ಶಾ ತಿಳಿದುಕೊಂಡಿದ್ದಾರಾ. ಇದನ್ನ ನಾನು ಅವರಿಗೆ ಕೇಳಲು ಬಯಸುತ್ತೇನೆ. ಜನರ ಆಶೀರ್ವಾದಿಂದ ಜನಪ್ರತಿನಿಧಿ ಆಗ್ತಾರೆ. ನಾವು ಯಾರೂ ಹಿಂಬಾಗಿಲಲ್ಲಿ ಪ್ರವೇಶ ಮಾಡಿಲ್ಲ. ಜನ ಸ್ವೀಕಾರ ಮಾಡಿದ ಮೇಲೆ ನಾವು ಜನಪ್ರತಿನಿಧಿ ಆಗಿದ್ದೇವೆ. ಅದಕ್ಕೆ ನಾವು ಇವರಿಂದ ಪರ್ಮೀಷನ್ ತಗೊಬೇಕಾ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ರಾಜ್ಯಕ್ಕೆ ಬಂದು ಬರೀ ಭಾಷಣ ಬಿಗಿಯುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕಕ್ಕಾಗಲಿ, ಇಲ್ಲಿನ ಜನತೆಗಾಗಲಿ ಏನಾದರೂ ಕೊಡುಗೆ ನೀಡಿದ್ದಾರೆಯೇ? ಮಹದಾಯಿ ಸಮಸ್ಯೆ ಸರಿಪಡಿಸಿದ್ದಾರಾ? ರಾಜ್ಯಕ್ಕೆ ಏನಾದರೂ ಕೊಡುಗೆ ಕೊಟ್ಟಿದ್ದಾರಾ? ಎಂದು ಪ್ರಶ್ನೆಗಳ ಸುರಿಮಳೆಗರೆದರು.

ರಾಜ್ಯದಲ್ಲಿ ಬಿಜೆ‍ಪಿ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಇಷ್ಟು ದಿನ ಏನೂ ಮಾಡದೇ ಚುನಾವಣೆಯ ಹಿನ್ನೆಲೆ ಕಾಟಾಚಾರಕ್ಕಾಗಿ ಮಹದಾಯಿ ಬಗ್ಗೆ ಘೋಷಣೆ ಮಾಡಿ, ಗೋವಾದವರಿಂದ ತಕರಾರು ತೆಗೆಸಿದ್ದಾರೆ. ಇಂಥವರಿಂದ ಕರ್ನಾಟಕದ ಜನತೆ ಏನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com