ಬಿಎಸ್ ವೈ ಆಪ್ತ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ: ಸಿಟಿ ರವಿಗೆ ತವರಿನಲ್ಲಿ ಹಿನ್ನಡೆ!

ಲಿಂಗಾಯತ ಸಮುದಾಯದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹೆಚ್ ಡಿ ತಮ್ಮಯ್ಯ ಅವರಿಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾಂಗ್ರೆಸ್ ಸೇರ್ಪಡೆಯಾದ ತಮ್ಮಯ್ಯ
ಕಾಂಗ್ರೆಸ್ ಸೇರ್ಪಡೆಯಾದ ತಮ್ಮಯ್ಯ
Updated on

ಬೆಂಗಳೂರು: ಲಿಂಗಾಯತ ಸಮುದಾಯದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹೆಚ್ ಡಿ ತಮ್ಮಯ್ಯ ಅವರಿಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರಿಗೆ ತವರಿನಲ್ಲಿ ಹಿನ್ನೆಡೆಯಾಗಿ ಪರಿಣಮಿಸಿದೆ. ಚಿಕ್ಕಮಗಳೂರು ನಗರಸಭೆ ಮಾಜಿ  ಅಧ್ಯಕ್ಷರಾಗಿದ್ದ ತಮ್ಮಯ್ಯ, ಸುಮಾರು 15 ವರ್ಷಗಳಿಂದ ಸಿಟಿ ರವಿ ಜೊತೆಯಲ್ಲಿದ್ದರು. ಸ್ವಲ್ವ ಸಮಯದಿಂದ ಅವರನ್ನು ನಿರ್ಲಕ್ಷಿಸಿದ್ದರಿಂದ ಬೇಸತ್ತಿದ್ದರು.  

ತಮ್ಮಯ್ಯ ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು ಆದರೆ, ಆನಂದ್ ಅವರನ್ನು ಅಧ್ಯಕ್ಷರನ್ನಾಗಿ ಸಿಟಿ ರವಿ ಮಾಡಿದ್ದರು. ಈ ಮಧ್ಯೆ ಕಾಮಗಾರಿ ಗುತ್ತಿಗೆ ವಿಚಾರದಲ್ಲಿ ರವಿ ಅವರ ಸೋದರ ಸಂಬಂಧಿಯ ಏಕಸ್ವಾಮ್ಯತ್ವದಿಂದ ಸ್ಥಳೀಯ ಬಿಜೆಪಿ ಮುಖಂಡರು ಬೇಸತ್ತಿದ್ದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಸತತ ನಾಲ್ಕು ಅವಧಿಗೆ ಗೆದ್ದಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಸಿಟಿ ರವಿ ಐದನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ಮತ್ತು ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗುವ ಹಂಬಲದಲ್ಲಿರುವ ರಾಜ್ಯದ ಬಿಜೆಪಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ. ಸಿಟಿ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ನಂತರ ತನ್ನ ರಾಜಕೀಯ ಕಾರ್ಯಾಚರಣೆಯನ್ನು ಬದಲಾಯಿಸಿದ್ದು, ಪಕ್ಷದ ಕೆಲ ಕಾರ್ಯಕರ್ತರು ಗೊಂದಲದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಮುಂಬರುವ ಚುನಾವಣೆಯಲ್ಲಿ ಲಿಂಗಾಯತರು, ಮುಸ್ಲಿಮರು, ಎಸ್‌ಸಿ/ಎಸ್‌ಟಿ/ಒಬಿಸಿಗಳು ಕಾಂಗ್ರೆಸ್ ಪರವಾಗಿ ಒಗ್ಗೂಡಿದರೆ ಕ್ಷೇತ್ರದಲ್ಲಿ ಒಕ್ಕಲಿಗರ ಸಂಖ್ಯೆ ಕಡಿಮೆ ಇರುವುದರಿಂದ ಪಕ್ಷದ ಅಭ್ಯರ್ಥಿ ಸಿಟಿ ರವಿಗೆ ಕಠಿಣವಾಗಲಿದೆ  ಎಂದು ಮುಖಂಡರೊಬ್ಬರು ಹೇಳುತ್ತಾರೆ. 

1978ರ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರನ್ನು ಆಯ್ಕೆ ಮಾಡುವ ಮೂಲಕ ರಾಜಕೀಯವಾಗಿ ಮರುಜನ್ಮ ನೀಡಿದ ಚಿಕ್ಕಮಗಳೂರು ರಾಜಕೀಯವಾಗಿ ಮಹತ್ವದ್ದಾಗಿದೆ. ಇದೀಗ ಬಿಜೆಪಿ ನಾಯಕರು ಪಕ್ಷಕ್ಕೆ ಸೇರ್ಪಡೆ ಗೊಳ್ಳುವುದರೊಂದಿಗೆ ರಾಜ್ಯದಲ್ಲಿ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ. ದೇಶ ಮತ್ತು ರಾಜ್ಯ ರಾಜಕೀಯ ಬದಲಾವಣೆಯ ಸಂದೇಶ ನೀಡಿರುವ ಇತಿಹಾಸ ಹೊಂದಿರುವ  ಚಿಕ್ಕಮಗಳೂರು ಜಿಲ್ಲೆಯ ಜನರು ಪ್ರಜ್ಞಾವಂತರು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com