ಅಸೆಂಬ್ಲಿ ಚುನಾವಣೆ 2023: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಕಿಡ್ನಿ ಮಾರಲು ರೆಡಿ ಎಂದ ಯುವಕ!

ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ, ಹಣದ ವಿಷಯಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಹಳೆಯ ಪಕ್ಷ ಕಾಂಗ್ರೆಸ್ ನಲ್ಲಿ 224 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1,350 ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಯೊಬ್ಬರು ಕೇವಲ ಅರ್ಜಿ ಸಲ್ಲಿಸಲು ರೂ.2 ಲಕ್ಷ ಪಾವತಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ, ಹಣದ ವಿಷಯಗಳ ಬಗ್ಗೆ ಚರ್ಚೆ ಆರಂಭವಾಗಿದೆ. ಹಳೆಯ ಪಕ್ಷ ಕಾಂಗ್ರೆಸ್ ನಲ್ಲಿ 224 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 1,350 ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಯೊಬ್ಬರು ಕೇವಲ ಅರ್ಜಿ ಸಲ್ಲಿಸಲು ರೂ.2 ಲಕ್ಷ ಪಾವತಿಸಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇರುವುದರಿಂದ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹಣಬಲವೂ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಗುಸುಗುಸು ಕೇಳಿಬರುತ್ತಿದೆ. ಜಾತಿಯ ಹೊರತಾಗಿ ಅಭ್ಯರ್ಥಿಯ ಹಣಕಾಸು ಹಿನ್ನೆಲೆಯೂ ಅಂತಿಮವಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿರ್ದಿಷ್ಟವಾಗಿ ಹೇಳಿರುವುದಾಗಿ ಮೂಲಗಳು ಹೇಳಿವೆ. ಆದ್ದರಿಂದ ಕೆಲ ಆಕಾಂಕ್ಷಿಗಳು ಪಕ್ಷಕ್ಕೆಹಣ ನೀಡಲು ಸಿದ್ದತೆ ನಡೆಸಿದ್ದಾರೆ. 

ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವೈಎಸ್ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆತನಿಗೆ ಟಿಕೆಟ್ ಕೊಡಿಸಲು ಅವರ ಅಭಿಮಾನಿಗಳು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿಯ ಅಭಿಮಾನಿಗಳಲ್ಲಿ ಒಬ್ಬರಾದ ಪ್ರಭು ಕುಮಾರ್,  ಕುರುಬ ಸಮುದಾಯಕ್ಕೆ ಸೇರಿರುವ ವೈಎಸ್ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡುವಂತೆ ಭರವಸೆ ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. 

ವೈಎಸ್ ಸಿದ್ದರಾಮಯ್ಯ ಅವರಿಗೆ ಕಿಡ್ನಿ ಮಾರಾಟ ಮಾಡಿ ಹಣ ಹೊಂದಿಸುವುದಾಗಿ ಪ್ರಭು ಭರವಸೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಚುನಾವಣೆಯಲ್ಲಿ ಹಣಕ್ಕೆ ಎಷ್ಟು ಪ್ರಾಮುಖ್ಯತೆ ಇರಲಿದೆ ಎಂಬ ಕಠೋರ ವಾಸ್ತವ ಸೂಚನೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com