ಬಿಜೆಪಿ, ಮೋದಿ ಎಂದಿಗೂ ನನ್ನನ್ನು ಕಡೆಗಣಿಸಿಲ್ಲ: ಯಡಿಯೂರಪ್ಪ ವಿದಾಯ ಭಾಷಣ

ಹಲವು ದಶಕಗಳಿಂದ ರಾಜ್ಯ ವಿಧಾನಸಭೆಯ ಸದಸ್ಯರಾಗಿರುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ಬಹುತೇಕ ವಿದಾಯ ಭಾಷಣ ಮಾಡಿದರು. ತನ್ನ ಉಸಿರು ಇರುವವರೆಗೂ ಪಕ್ಷ ಬಲಗೊಳಿಸಲು ಹಾಗೂ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಯಡಿಯೂರಪ್ಪ
ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಯಡಿಯೂರಪ್ಪ
Updated on

ಬೆಂಗಳೂರು: ಹಲವು ದಶಕಗಳಿಂದ ರಾಜ್ಯ ವಿಧಾನಸಭೆಯ ಸದಸ್ಯರಾಗಿರುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ಬಹುತೇಕ ವಿದಾಯ ಭಾಷಣ ಮಾಡಿದರು. ತನ್ನ ಉಸಿರು ಇರುವವರೆಗೂ ಪಕ್ಷ ಬಲಗೊಳಿಸಲು ಹಾಗೂ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

ಸಕ್ರಿಯ ರಾಜಕಾರಣದಿಂದ ಈಗಾಗಲೇ ನಿವೃತ್ತಿ ಘೋಷಿಸಿರುವ 79 ವರ್ಷದ ಹಿರಿಯ ನಾಯಕ,  ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ವಿಧಾನಸಭಾ ಅಧಿವೇಶನ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಪಕ್ಷ ಹಾಗೂ ಅದರ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ತಿಳಿಸಿದರು. 

ರಾಜ್ಯ ಬಜೆಟ್ ಮೇಲಿನ ಭಾಷಣ ಚರ್ಚೆ ವೇಳೆ ಮಾತನಾಡಿದ ಬಿಎಸ್ ವೈ, ಜನರ ಮುಂದೆ ಆತ್ಮವಿಶ್ವಾಸದ ಹೋಗಿ ಮತ ಕೇಳಿ ಎಂದು  ಆಡಳಿತಾರೂಢ ಪಕ್ಷದ ಸದಸ್ಯರಿಗೆ ಪದೇ ಪದೇ ಹೇಳಿದರು. ಅಲ್ಲದೇ, ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದು ಖಚಿತ. ಈ ಚುನಾವಣೆಯ ಐದು ವರ್ಷಗಳ ನಂತರ ಮುಂದಿನ ಚುನಾವಣೆಯಲ್ಲೂ ದೇವರು ನನಗೆ ಶಕ್ತಿ ನೀಡಿದರೆ,  ಬಿಜೆಪಿ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನ ಮಾಡುತ್ತೇನೆ. ನಿಮಗೆ ತಿಳಿದಿರುವಂತೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷ ನನಗೆ ನೀಡಿದ ಗೌರವ ಮತ್ತು ಸ್ಥಾನಗಳನ್ನು ನನ್ನ ಜೀವಿತಾವಧಿಯಲ್ಲಿ ಮರೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಶುಕ್ರವಾರದಂದು ಅಧಿವೇಶನ ಮುಕ್ತಾಯವಾಗಲಿದ್ದು, ವಿಧಾನಸಭೆಯಲ್ಲಿ ಕೊನೆಯ ಬಾರಿಗೆ ಮಾತನಾಡುತ್ತಿರುವಂತೆ ಕಂಡ ಯಡಿಯೂರಪ್ಪ, ‘ಇದು ಒಂದು ರೀತಿಯಲ್ಲಿ ನನ್ನ ವಿದಾಯ, ನಾನು ವಿಧಾನಸಭೆಗೆ ಬಂದು ಮಾತನಾಡಲು ಸಾಧ್ಯವಿಲ್ಲ’ ಎಂದು ಹೇಳಿದರು. ಆದಾಗ್ಯೂ, ಮಧ್ಯ ಪ್ರವೇಶಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಮಧ್ಯಪ್ರವೇಶಿಸಿ, ಯಡಿಯೂರಪ್ಪ ಅವರು ಶುಕ್ರವಾರ ಸದನದಲ್ಲಿ ಕೊನೆಯ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು. 

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ತಮ್ಮ ಶಿಕಾರಿಪುರ ವಿಧಾನಸಭಾ ಸ್ಥಾನವನ್ನು ತೆರವು ಮಾಡುವುದಾಗಿ ಕಳೆದ ವರ್ಷ ಜುಲೈನಲ್ಲಿ ಘೋಷಿಸಿದ್ದ  ಯಡಿಯೂರಪ್ಪ, ಹೈಕಮಾಂಡ್ ಒಪ್ಪಿಗೆ ನೀಡಿದರೆ ಅವರ ಕಿರಿಯ ಮಗ ಮತ್ತು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 'ಪುರಸಭಾ' ಅಧ್ಯಕ್ಷರಾಗಿ ಚುನಾವಣಾ ರಾಜಕೀಯ ಆರಂಭಿಸಿದ ಹಿರಿಯ ನಾಯಕ, 1983 ರಲ್ಲಿ ಶಿಕಾರಿಪುರದಿಂದ ಮೊದಲು ವಿಧಾನಸಭೆಗೆ ಆಯ್ಕೆಯಾದರು ಮತ್ತು ಅಲ್ಲಿಂದ ಎಂಟು ಬಾರಿ ಗೆಲುವು ಸಾಧಿಸಿದ್ದಾರೆ.

ಯಡಿಯೂರಪ್ಪ ಅವರಿಗೆ ಅನ್ಯಾಯ ಮಾಡಿದ್ದಾರೆ ಮತ್ತು ನನ್ನನ್ನು ನಿರ್ಲಕ್ಷಿಸಿದ್ದಾರೆ ಎಂದು ಬಿಜೆಪಿಯನ್ನು ಟೀಕಿಸುವ ಕೆಲವು ಭಾಷಣಗಳನ್ನು ಕೇಳಿದ್ದೇನೆ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ  ಅವರು ಎಂದಿಗೂ ನನ್ನನ್ನು ನಿರ್ಲಕ್ಷಿಸಿಲ್ಲ, ಅವರು ನೀಡಿದ ಅವಕಾಶಗಳು ಮತ್ತು ಸ್ಥಾನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.ಪಕ್ಷ ಅವಕಾಶ ನೀಡಿದ್ದರಿಂದ ನಾಲ್ಕು ಬಾರಿ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನನಗೆ ಸಿಕ್ಕಿರುವ ಅವಕಾಶಗಳು ಬೇರೆ ಯಾರಿಗೂ ಸಿಕ್ಕಿಲ್ಲ ಎಂದು ಯಡಿಯೂರಪ್ಪ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com