ಬಿಜೆಪಿ ಪ್ರಣಾಳಿಕೆ ಸಲಹಾ ಸಂಗ್ರಹ ಅಭಿಯಾನಕ್ಕೆ ಚಾಲನೆ

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದ್ದು, ಸಮೃದ್ಧ ಕರ್ನಾಟಕ ನಿರ್ಮಿಸಲು ಜನರ ಅಭಿಪ್ರಾಯದೊಂದಿಗೆ ಬಿಜೆಪಿ ಪ್ರಣಾಳಿಕೆ ತಯಾರಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಡಾ. ಕೆ. ಸುಧಾಕರ್, ಬಿಸಿ ನಾಗೇಶ್ ಮತ್ತಿತರರು
ಡಾ. ಕೆ. ಸುಧಾಕರ್, ಬಿಸಿ ನಾಗೇಶ್ ಮತ್ತಿತರರು

ಬೆಂಗಳೂರು: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದ್ದು, ಸಮೃದ್ಧ ಕರ್ನಾಟಕ ನಿರ್ಮಿಸಲು ಜನರ ಅಭಿಪ್ರಾಯದೊಂದಿಗೆ ಬಿಜೆಪಿ ಪ್ರಣಾಳಿಕೆ ತಯಾರಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ತಯಾರಿಕೆ ಕುರಿತು ಮಾಹಿತಿ ಸಚಿವರು ಮಾಹಿತಿ ಹಂಚಿಕೊಂಡರು. 'ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯೇ ಭರವಸೆ' ಎಂಬ ಘೋಷಣೆಯಲ್ಲಿ ಜನರ ಬಳಿಗೆ ಹೋಗುತ್ತೇವೆ. ಕನಿಷ್ಠ 50 ಸೆಕ್ಟರ್ ಸಭೆಗಳನ್ನು ಮಾಡಲಿದ್ದೇವೆ. ಕೃಷಿ, ತೋಟಗಾರಿಕೆ, ರೇಷ್ಮೆ ಮೊದಲಾದ ಕ್ಷೇತ್ರಗಳಲ್ಲಿ ರೈತರೊಂದಿಗೆ ಸಭೆ ನಡೆಸಿ, ಸಲಹೆ ಪಡೆಯಲಾಗುವುದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಯಲ್ಲೂ ಸಭೆ ನಡೆಸಿ ಸಂಘಟನೆಗಳ ಸಲಹೆ, ಸೂಚನೆ ಪಡೆಯಲಾಗುವುದು ಎಂದರು.

ವಾಟ್ಸಾಪ್ ನಂಬರ್ 8596158158 ಮತ್ತು ವೆಬ್ ಸೈಟ್ www.bjp4samruddhakarnataka.in ಮೂಲಕ ಜನರು ಸಲಹೆ ಕಳುಹಿಸಬಹುದು, ಕನಿಷ್ಠ 1 ಕೋಟಿ ಜನರನ್ನು ತಲುಪುವ ಗುರಿ ಇದೆ. ಮಾರ್ಚ್ 25 ರವರೆಗೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಿರಂತರ ಸಭೆ ಮಾಡಲಾಗುವುದು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬೆಂಗಳೂರು ನಗರ ಮೊದಲಾದ ವಿಭಾಗಗಳಲ್ಲೂ ಸಲಹೆ ಪಡೆಯಲಾಗುವುದು, ಪ್ರಗತಿ ರಥಗಳಲ್ಲಿ ಸಲಹಾ ಪೆಟ್ಟಿಗೆ ಇಟ್ಟು ಅಲ್ಲಿಂದಲೂ ಸಲಹೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com