ಸರ್ಕಾರದ ಸಾಧನೆಗಳನ್ನು ಬಿಂಬಿಸಿ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಮಾಧುಸ್ವಾಮಿ

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ರೈತರಿಗೆ ನೆರವು, ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು ಮಂಗಳವಾರ ಹೇಳಿದ್ದು...
ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ರೈತರಿಗೆ ನೆರವು, ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಅವರು ಮಂಗಳವಾರ ಹೇಳಿದ್ದು, ವಿರೋಧ ಪಕ್ಷಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳ ಪರವಾಗಿ ಮಂಗಳವಾರ ಮಾಧುಸ್ವಾಮಿಯವರು ಉತ್ತರಿಸಿದರು.

ಈ ವೇಳೆ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಸರ್ಕಾರವನ್ನು ಟೀಕಿಸುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಲು ಸಹಾಯ ಮಾಡುವ ಎಪಿಎಂಸಿ ಕಾಯ್ದೆಗೆ ತಿದ್ದುಪಡಿಯನ್ನು ಏಕೆ ವಿರೋಧಿಸುತ್ತೀರಿ ಎಂದು ಕಾಂಗ್ರೆಸ್‌ಗೆ ಪ್ರಶ್ನಿಸಿದರು.

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಎಪಿಎಂಸಿಯಲ್ಲಿ ಉತ್ಪನ್ನ ಮಾರಾಟಕ್ಕೆ ಸಡಿಲಿಕೆ ನೀಡುವಂತೆ ಕಾಂಗ್ರೆಸ್ ಮುಖಂಡರು ಕೂಡ ಕೇಳಿದ್ದರು, ಆದರೆ, ಈಗ ಅದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಎಂದು ಪ್ರಶ್ನಿಸಿದರು.

ಎಪಿಎಂಸಿ ಮಾರುಕಟ್ಟೆಯಲ್ಲಿ ಯಾವುದೇ ವ್ಯಕ್ತಿ ಮಾರಾಟ ಮಾಡುವುದನ್ನು ನಾವು ತಡೆದಿಲ್ಲ, ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕಗಳು ಮತ್ತು ವೆಂಟಿಲೇಟರ್‌ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು..

ಇದೇ ವೇಳೆ ಕಾಂಗ್ರೆಸ್ ನಾಯಕರು ಒಂದೇ ಕುಟುಂಬದ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಮಧುಸ್ವಾಮಿ ಟೀಕಿಸಿದರು.

ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಮಾತಿನ ಸಮರ ನಡೆಯಿತು. ಈ ನಡುವೆ ಮಾತನಾಡಿ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸದೇ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಿಎಂ ಆಗಿದ್ದರು ಎಂದು ತಿರುಗೇಟು ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com