ಸ್ಥಳೀಯ ಸಂಸ್ಥೆ ಚುನಾವಣೆ: ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಡಿ

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡವು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಗಳವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡವು.

ಚುನಾವಣೆ ನಡೆದು ಒಂದು ವರ್ಷ ಕಳೆದರೂ 55 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿಲ್ಲ. ಪ್ರತಿಪಕ್ಷ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

ಇನ್ನು 15 ದಿನಗಳಲ್ಲಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿದ್ದು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಯಾವಾಗ ನಡೆಸುತ್ತೀರಿ ಎಂದು ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹಾಗೂ ಪಾಲಿಕೆ ಸದಸ್ಯರು ಸರ್ಕಾರವನ್ನು ಪ್ರಶ್ನಿಸಿದರು.

ಈ ವೇಳೆ ಉತ್ತರಿಸಿದ ಸರ್ಕಾರ ನ್ಯಾಯಾಲಯದ ಮೊಕದ್ದಮೆಗಳಿಂದಾಗಿ ಪ್ರಕ್ರಿಯೆ ವಿಳಂಬವಾಗಿದೆ ಎಂದು ಉತ್ತರಿಸಿತು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು.

ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ನ್ಯಾಯಾಲಯದಲ್ಲಿರುವ ಪ್ರಕರಣದಿಂದಾಗಿ ಪ್ರಕ್ರಿಯೆ ವಿಳಂಬವಾಗಿದ್ದು, ಪ್ರಕ್ರಿಯೆ ತ್ವರಿತಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ವಿಚಾರ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com