ಬಿಜೆಪಿ ಪಕ್ಷ ಸೇರಲಿಲ್ಲ ಅನಂತ್ ನಾಗ್: ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ರಾ ಹಿರಿಯ ನಟ?

ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅನಂತ್​ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅನಂತ್ ನಾಗ್ ಅವರು (ಫೆ.22) ಸಂಜೆ ಬೆಂಗಳೂರಿನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿತ್ತು.
ಅನಂತ್ ನಾಗ್
ಅನಂತ್ ನಾಗ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅನಂತ್​ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅನಂತ್ ನಾಗ್ ಅವರು (ಫೆ.22) ಸಂಜೆ ಬೆಂಗಳೂರಿನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿತ್ತು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವರೆಂದು ಹೇಳಲಾಗಿತ್ತು. ಅವರ ಬರುವಿಕೆಗಾಗಿ ಪಕ್ಷದ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಕಾದು ಕುಳಿತಿದ್ದರು. ಕಟೀಲ್​ ನೇತೃತ್ವದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿದರು ಆದರೆ ಕೊನೇಕ್ಷಣದಲ್ಲಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

90ರ ದಶಕದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಜೆಎಚ್ ಪಟೇಲ್ ಗರಡಿಯಲ್ಲಿ ಪಳಗಿದ್ದ ಅವರು ಜನತಾದಳ ವಿಭಜನೆಯಾದ ಬಳಿಕ ರಾಜಕೀಯದಿಂದ ದೂರ ಉಳಿದು ಚಿತ್ರರಂಗದ ಕಡೆಗೆ ಮಾತ್ರ ಗಮನ ಹರಿಸಿದ್ದರು, ಜನತಾ ದಳದಿಂದ ರಾಜಕೀಯ ಪ್ರವೇಶ ಮಾಡಿದ್ದ ಅನಂತ್ ನಾಗ್ ನಂತರ ಚುನಾವಣೆಯಿಂದ ದೂರ ಉಳಿದಿದ್ದರು.

ಬುಧವಾರ ಸಂಜೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಆದ್ರೆ, ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದು, ಒಂದು ವಾರದ ಬಳಿಕ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಅಲ್ಲದೇ ಅನಂತ್ ನಾಗ್ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯಿಂದ ದೂರ ಉಳಿದರಾ? ಎಂಬ ಪ್ರಶ್ನೆ ಮೂಡಿದೆ.

ಮಾಹಿತಿ ಪ್ರಕಾರ ಮುಂದಿನ ವಾರ ರಾಷ್ಟ್ರೀಯ ನಾಯಕ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.  ಕೊನೆಯ ಕ್ಷಣದಲ್ಲಿ ಅವರು ಕಾರ್ಯಕ್ರಮಕ್ಕೆ ಗೈರಾಗಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಅವರು ಸಹ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.  ಇದೇ ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಏನಾದರೂ ಬಿಜೆಪಿ ಸೇರ್ಪಡೆಯಾಗುತ್ತಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಅನಂತ್ ನಾಗ್ ಬಿಜೆಪಿ ಸೇರಲಿದ್ದಾರೆ ಎನ್ನುವ ಹೊರಬೀಳುತ್ತಿದ್ದಂತೆಯೇ ರಾಜ್ಯದಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗಳು ನಡೆದಿದ್ದವು. ಕೆಲವರು ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ರೆ, ಇನ್ನೂ ಕೆಲವರು ಒಳ್ಳೆಯ ನಿರ್ಧಾರ ಎಂದಿದ್ದಾರೆ. ಇನ್ನಷ್ಟು ಜನ ಈ ರಾಜಕೀಯ ಸಹವಾಸ ಬೇಡವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com