ಕಲ್ಯಾಣ ಕರ್ನಾಟಕದ ಮೇಲೆ ಬಿಜೆಪಿ ಕಣ್ಣು: ಕಾಂಗ್ರೆಸ್ ಭದ್ರಕೋಟೆ ಸಂಡೂರಿನಲ್ಲಿ ಕಮಲ ಅರಳಿಸಲು 'ಶಾ' ಮಾಸ್ಟರ್ ಪ್ಲಾನ್!

ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮತ್ತು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಬಳ್ಳಾರಿ:  ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮತ್ತು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.

ಅಮಿತ್ ಶಾ ಅವರ ಕಲ್ಯಾಣ ಕರ್ನಾಟಕ ಭೇಟಿಯು ಈ ಭಾಗದ ಬಿಜೆಪಿ ಕಾರ್ಯಕರ್ತರಿಗೆ ಅಗತ್ಯವಾದ ಉತ್ತೇಜನವನ್ನು ನೀಡುತ್ತದೆ. ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಪಾದರಸದಂತೆ ಸಕ್ರಿಯರಾಗಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಹಾಲಿ ಶಾಸಕರಾಗಿರುವ ಇ.ತುಕಾರಂ ಸತತ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದಾರೆ. ನಾಲ್ಕನೇ ಬಾರಿಯೂ ಸಂಡೂರಿನಲ್ಲಿ ಗೆಲ್ಲುವ ವಿಶ್ವಾಸವನ್ನು ತುಕಾರಂ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಪಕ್ಷದ ನಾಯಕರ ಗಮನ ಕೋರ್ ಕಮಿಟಿ ಸಭೆಯ ಮೇಲೆ ಕೇಂದ್ರೀಕೃತವಾಗಿದೆ ಏಕೆಂದರೆ ಅದು ಮೇಲಿನ ನಾಲ್ಕು ಜಿಲ್ಲೆಗಳಿಂದ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಬಹುದು. ನಾವು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಲು ಯೋಜಿಸುತ್ತಿದ್ದೇವೆ, ಕ್ಷೇತ್ರದ ಪ್ರಚಾರ ಸಂಡೂರಿನಿಂದ ಪ್ರಾರಂಭವಾಗುತ್ತದೆ ಎಂದು ಸ್ಥಳೀಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ನಾಲ್ಕು ಕ್ಷೇತ್ರಗಳು ಎಸ್ಟಿಗೆ ಮೀಸಲಾಗಿವೆ. ರಾಜ್ಯ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ನಾವು ಎಲ್ಲಾ ಮೀಸಲು ಕ್ಷೇತ್ರಗಳನ್ನು ಗೆಲ್ಲಲು ಬಯಸಿದ್ದೇವೆ. ಅಮಿತ್ ಶಾ ಅವರ ಸೂಚನೆ ಸ್ಪಷ್ಟವಾಗಿದ್ದು,  ಅಭಿವೃದ್ಧಿ ಕೆಲಸಗಳ ವರದಿ  ಮತ್ತು ಮೀಸಲಾತಿ ಹೆಚ್ಚಳವನ್ನು ಜನರ ಮುಂದೆ ಇಡುತ್ತೇವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಭದ್ರಕೋಟೆಯಾಗಿರುವ ಸಂಡೂರು ಈ ಬಾರಿ ಬಿಜೆಪಿ ಪಾಲಾಗಲಿದೆ ಎಂದು ಮತ್ತೊಬ್ಬ ಬಿಜೆಪಿ ಮುಖಂಡ ಹೇಳಿದ್ದಾರೆ. ಅಮಿತ್ ಶಾ ಸಂಡೂರಿಗೆ ಭೇಟಿ ನೀಡಿರುವುದು ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲಿದೆ. ರ್ಯಾಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಬಿ ಶ್ರೀರಾಮುಲು ಅವರ ಉಪಸ್ಥಿತಿಯು ನಮ್ಮ ಕಾರ್ಯಕರ್ತರಿಗೆ ಮತ್ತಷ್ಟು ಉತ್ತೇಜನ ನೀಡುತ್ತದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com