ನಾನು ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ: ಎ. ಮಂಜು

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್  ಪಕ್ಷದ ಅಧಿಕೃತ ಅಭ್ಯರ್ಥಿಯಾಗುವುದಾಗಿ ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.
ಎ. ಮಂಜು
ಎ. ಮಂಜು
Updated on

ಹಾಸನ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್  ಪಕ್ಷದ ಅಧಿಕೃತ ಅಭ್ಯರ್ಥಿಯಾಗುವುದಾಗಿ ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.

ಈ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಹೋರಾಡಿದ್ದ ನನಗೆ, ಗೌಡರ ಕುಟುಂಬದೊಂದಿಗೆ ಯಾವುದೇ ವೈಯಕ್ತಿಕ ಮನಸ್ತಾಪ ಅಥವಾ ದ್ವೇಷ ಹೊಂದಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಚರ್ಚಿಸಿ ಟಿಕೆಟ್ ಭರವಸೆ ನೀಡಿರುವುದರಿಂದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಹೋರಾಡಲು ನಿರ್ಧರಿಸಿರುವುದಾಗಿ ತಿಳಿಸಿದರು.

2023ರ ವಿಧಾನಸಭಾ ಚುನಾವಣೆ ತಮಗೆ ಕೊನೆಯ ಚುನಾವಣೆಯಾಗಿದ್ದು, ಮುಂದೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ರಾಜಕೀಯ ಪಕ್ಷಗಳನ್ನು ಬದಲಾಯಿಸುವುದರಲ್ಲಿ ತಪ್ಪೇನಿದೆ ಮತ್ತು ಚುನಾಯಿತ ಪ್ರತಿನಿಧಿಗಳ ಉದ್ದೇಶವು ಜನಸೇವೆಯಾಗಬೇಕು ಮತ್ತು ಚುನಾಯಿತರು ಜನರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು. 

ಅರಕಲಗೂಡು ಕ್ಷೇತ್ರವನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಎ ಮಂಜು, ತಾವು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಜನರ ಬಳಿ ತಿಳಿಸುವುದಾಗಿ ಹೇಳಿದರು.  2019ರ ಲೋಕಸಭೆ ಚುನಾವಣೆ ವೇಳೆ ನಾಮಪತ್ರ ಸಲ್ಲಿಸುವ ವೇಳೆ ಸುಳ್ಳು ಅಫಿಡವಿಟ್ ಸಲ್ಲಿಸಿರುವ ಕುರಿತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. 

ನಾಲ್ಕೂವರೆ ವರ್ಷಗಳಿಂದ ಮೌನ ವಹಿಸಿದ್ದ ಜೆಡಿಎಸ್‌ನ ಹಾಲಿ ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್‌ ನಾಯಕರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಂಜು ಟೀಕಿಸಿದರು. ಎ ಮಂಜು ಅವರು ಅರಕಲಗೂಡು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು ರಾಜಕೀಯಕ್ಕೆ ಎಂಟ್ರಿಕೊಟ್ಟು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಸೇವೆ ಸಲ್ಲಿಸಿ ಈಗ ಜೆಡಿಎಸ್ ಅಭ್ಯರ್ಥಿಯಾಗುವ  ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳನ್ನು ಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com