ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಕರ್ನಾಟಕಕ್ಕೆ ಟೂರಿಸ್ಟ್- ಕಾಂಗ್ರೆಸ್ ಟೀಕೆ

ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ, ನಯಾಪೈಸೆ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿ ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ, ನಯಾಪೈಸೆ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿ ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ ಕೇಳಿದ್ದರು, ಆ ಲೂಟಿಯ ಬಗ್ಗೆ ತನಿಖೆಯೇ ಇಲ್ಲ. ಭ್ರಷ್ಟಾಚಾರದ ಆರೋಪದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿಯ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರರ ಪತ್ರಕ್ಕೆ ಪ್ರಧಾನಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು  ಎಂದು ಕಾಂಗ್ರೆಸ್ ಹೇಳಿದೆ.

ಮೋದಿ ಸರ್ವಶಕ್ತ, ಸರ್ವಾಂತರ್ಯಾಮಿ ಎನ್ನುವ ಬಿಜೆಪಿ ಸರ್ವಶಕ್ತ ಮೋದಿಗೆ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗಿಲ್ಲವೇಕೆ ಎಂದರೆ ಪಾಕಿಸ್ತಾನದ ಕಡೆ ಕೈ ತೋರಿಸುತ್ತಾರೆ! ಗ್ಯಾಸ್ ಬೆಲೆಯನ್ನು ರೂ. 1,000,  ಪೆಟ್ರೋಲ್ ಬೆಲೆಯನ್ನು ರೂ.100 ದಾಟಿಸಿ, ಜನರ ಬದುಕಿನ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಮೋದಿಗೆ ಧನ್ಯವಾದಗಳು ಎಂದು ಹೇಳಲಾಗಿದೆ. 

ಕರ್ನಾಟಕದಲ್ಲಿ ಭ್ರಷ್ಟಾಚಾರವು ಡಬಲ್ ವೇಗದಲ್ಲಿ ಮುನ್ನುಗ್ಗುತ್ತಿದೆ. ಮೋದಿ ಅವರೇ, ಭ್ರಷ್ಟಾಚಾರಕ್ಕೆ ಯಾವುದೇ ತಡೆಯಿಲ್ಲದೆ, ಯಾವುದೇ ಅಂಜಿಕೆ, ಅಳುಕಿಲ್ಲದೆ ಶೇ. 40 ಪರ್ಸೆಂಟ್ ನಡೆಸಿದ್ದಕ್ಕೆ ತಮಗೆ ಧನ್ಯವಾದಗಳು."ಮೋದಿ ಹೈ ತೊ ಮುಮ್ಕಿನ್ ಹೈ" ಎನ್ನುವಂತೆ ಇದು ಸಾಧ್ಯವಾಗಿದ್ದು ನಿಮ್ಮಿಂದಲೇ ಅಲ್ಲವೇ! ಎಂದು ಕಾಂಗ್ರೆಸ್ ಕೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com