ಸಿದ್ದರಾಮಯ್ಯ
ರಾಜಕೀಯ
'ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ': ಸಿದ್ದರಾಮಯ್ಯ
ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಪರ್ವ. ಈ ಬಾರಿ ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಸಾಧ್ಯವಾದ ತಂತ್ರಗಳೆಲ್ಲವನ್ನೂ ಮಾಡುತ್ತಿದೆ. ವಾರ ವಾರ ಎಂಬಂತೆ ಬಿಜೆಪಿ ನಾಯಕರು ದೆಹಲಿಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭೆ ಚುನಾವಣೆ ಪರ್ವ. ಈ ಬಾರಿ ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳಲು ಬಿಜೆಪಿ ಸಾಧ್ಯವಾದ ತಂತ್ರಗಳೆಲ್ಲವನ್ನೂ ಮಾಡುತ್ತಿದೆ. ವಾರ ವಾರ ಎಂಬಂತೆ ಬಿಜೆಪಿ ನಾಯಕರು ದೆಹಲಿಯಲ್ಲಿ ರಾಜ್ಯಕ್ಕೆ ಬರುತ್ತಿದ್ದಾರೆ.
ಇಂದು ಮಾಜಿ ಸಿಎಂ ಯಡಿಯೂರಪ್ಪನವರ 80ನೇ ಹುಟ್ಟುಹಬ್ಬ. ಬಹುನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿದ್ದು ಇನ್ನು ಕೆಲವೇ ಕ್ಷಣಗಳಲ್ಲಿ ಏರ್ ಪೋರ್ಟ್ ಉದ್ಘಾಟನೆಯಾಗಲಿದೆ.
ರಾಜ್ಯಕ್ಕೆ ಮೋದಿ ಆಗಮನ ವಿಚಾರಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರವಾಹ, ಜನ ಸತ್ತಾಗ ಬರಲಿಲ್ಲ ಈಗ ಬರಲು ಶುರು ಮಾಡಿದ್ದಾರೆ. ಯಾಕೆಂದರೆ ರಾಜ್ಯ ಬಿಜೆಪಿಯಲ್ಲಿ ಲೀಡರ್ ಶಿಪ್ ಇಲ್ಲ. ಅದಕ್ಕೆ ಮೋದಿ ಮುಖ ಇಟ್ಟೊಕೊಂಡು ವೋಟ್ ಕೇಳ್ತಾರೆ ಎಂದು ಕುಟುಕಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ