ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪಗೆ ಅಧಿಕಾರ ನೀಡದ್ದಕ್ಕೆ ನನ್ನನ್ನು ಕ್ಷಮಿಸಿ: ವೀರಶೈವ ಸಮುದಾಯಕ್ಕೆ ಹೆಚ್'ಡಿಕೆ

ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರಿಂದ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದು ವೀರಶೈವರನ್ನು ಓಲೈಸಲು ಯತ್ನ ನಡೆಸಿದ್ದಾರೆ,
ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
Updated on

ಮೈಸೂರು: ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹಿರಿಯ ನಾಯಕರಿಂದ ಆಗಿರುವ ಅನ್ಯಾಯವನ್ನು ಎತ್ತಿ ಹಿಡಿದು ವೀರಶೈವರನ್ನು ಓಲೈಸಲು ಯತ್ನ ನಡೆಸಿದ್ದಾರೆ,

ಮೈಸೂರಿನಲ್ಲಿ ವೀರಶೈವ ಮುಖಂಡರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅವರು, ಬಿಜೆಪಿಯ ಪ್ರಮುಖ ಜೋಡಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಯಡಿಯೂರಪ್ಪ ಅವರನ್ನು ಮೂಲೆಗೆ ತಳ್ಳಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರವನ್ನು ದೆಹಲಿಯಿಂದ ನಿಯಂತ್ರಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು

ಯಡಿಯೂರಪ್ಪ ಅವರು ಪ್ರಧಾನಿ ಮತ್ತು ಕೇಂದ್ರದ ನಾಯಕರನ್ನು ಭೇಟಿ ಮಾಡಲು ಸಾಧ್ಯವಾಗದೆ ಅವಮಾನಕ್ಕೊಳಗಾಗಿರುವುದು ದುರದೃಷ್ಟಕರ ವಿಚಾರ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ-ಜೆಡಿಎಸ್ 20:20 ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದ್ದನ್ನು ಮರೆತು ಸಮುದಾಯ ನನ್ನನ್ನು ಕ್ಷಮಿಸಬೇಕು ಎಂದು ಹೇಳಿದರು.

ಅಧಿಕಾರ ವರ್ಗಾವಣೆಯಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಆದರೆ ನನ್ನನ್ನು ಬಲಿಪಶು ಮಾಡಲಾಯಿತು. ಸಮ್ಮಿಶ್ರ ಸರ್ಕಾರ ರಚನೆಗೂ ಮುನ್ನ ಯಶ್ವಂತ್ ಸಿನ್ಹಾ ಮತ್ತು ದೇವೇಗೌಡರು ಮಾತುಕತೆ ನಡೆಸಿದ್ದರು, ಆದರೆ, ಇಲ್ಲಿಯವರೆಗೆ ಅವರು ಏನು ಚರ್ಚಿಸಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಬಿಜೆಪಿ ಹೈಕಮಾಂಡ್ ಮಧ್ಯಸ್ಥಿಕೆಯಿಂದ ಸರ್ಕಾರ ರಚನೆಯಾಗದೆ, ಯಡಿಯೂರಪ್ಪ ಅವರೊಂದಿಗಿನ ಒಪ್ಪಂದದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಬೇಕಾಯಿತು. ಈ ಒಪ್ಪಂದಕ್ಕೆ ಸಹಿ ಹಾಕಲು ಹಿಂದೇಟು ಹಾಕಿದ್ದೆ. ನಂತರ ಮನಸ್ಸು ಬದಲಿಸಿ ಒಪ್ಪಂದಕ್ಕೆ ಸಹಿ ಹಾಕಲು ಬಯಸಿದೆ. ಆದರೂ, ಸರ್ಕಾರ ಪತನವಾಯಿತು ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಯಡಿಯೂರಪ್ಪನವರೇ ಕಾರಣ. ಯಡಿಯೂರಪ್ಪನವರ ಸ್ಥಿತಿ ಮತ್ತು ಭವಿಷ್ಯವೇನು? ಅವರನ್ನು ಬಿಜೆಪಿ ಹೈಕಮಾಂಡ್ ಹೇಗೆ ನಡೆಸಿಕೊಳ್ಳುತ್ತಿದೆ. ವೀರಶೈವರು ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲು ಮತ್ತು ಯುವ ಸಮುದಾಯದ ನಾಯಕರನ್ನು ಬೆಳೆಸಲು ಸಹಾಯ ಮಾಡಲು ಇದು ಸಕಾಲವಾಗಿದೆ ಎಂದು ಅವರು ಹೇಳಿದರು.

ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ಅನುಭವಿಸಿದ ಸಂಕಟವನ್ನು ಹಂಚಿಕೊಂಡು ಜೆಡಿಎಸ್ ಸೇರಲು ಬಯಸಿದ್ದರು. ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾನು ಅವರಿಗೆ ಸಲಹೆ ನೀಡಿದ್ದೇನೆ. ಜನತಾ ಪರಿವಾರದ ಬಿಜೆಪಿ ಶಾಸಕರು ಸೇರಿದಂತೆ ಹಲವು ನಾಯಕರು ನನ್ನ ಬಳಿ ಬಂದಿದ್ದರಿಂದ ನಾನು ದೇವೇಗೌಡರ ಆಶಯಕ್ಕೆ ವ್ಯತಿರಿಕ್ತವಾಗಿ ಸರ್ಕಾರ ರಚಿಸಿದೆ. ಆದರೆ ಅಧಿಕಾರಿಗಳ ವರ್ಗಾವಣೆ ಮತ್ತು ಜನಾರ್ದನ ರೆಡ್ಡಿ ನನ್ನ ವಿರುದ್ಧದ 150 ಕೋಟಿ ರೂಪಾಯಿ ಭ್ರಷ್ಟಾಚಾರದ ಆರೋಪ ಮಾಡಿದ ನಂತರ ಭಿನ್ನಾಭಿಪ್ರಾಯ ಉಂಟಾಯಿತು ಎಂದರು.

ಬಳಿಕ ಜನವರಿ 8ರಿಂದ ಬೀದರ್‌ನಲ್ಲಿ ಪಂಚರತ್ನ ರಥ ಯಾತ್ರೆ ಆರಂಭಿಸುವುದಾಗಿ ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಬೇಸತ್ತಿರುವ ಜನರು ಜೆಡಿಎಸ್‌ಗೆ ಪರ್ಯಾಯವಾಗಿ ಎದುರು ನೋಡುತ್ತಿದ್ದು, ವೀರಶೈವರು ಸೇರಿದಂತೆ ಹಲವು ಸಮುದಾಯಗಳು ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com