ಜನವರಿ 6 ರಂದು ಕಾಂಗ್ರೆಸ್'ನಿಂದ 'ನಾ ನಾಯಕಿ' ಸಮಾವೇಶ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಅದರ ಭಾಗವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಜನವರಿ 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ನಾ ನಾಯಕಿ' (ನಾನು ನಾಯಕಿ) ಸಮಾವೇಶವನ್ನು ಹಮ್ಮಿಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಅದರ ಭಾಗವಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಜನವರಿ 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ 'ನಾ ನಾಯಕಿ' (ನಾನು ನಾಯಕಿ) ಸಮಾವೇಶವನ್ನು ಹಮ್ಮಿಕೊಂಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು 86 ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಕನಿಷ್ಠ 30 ಟಿಕೆಟ್ ನೀಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

ಏತನ್ಮಧ್ಯೆ, ಕರ್ನಾಟಕದಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸುತ್ತಿರುವ ಬೆನ್ನಲ್ಲೇ, ಸಮುದಾಯಗಳನ್ನು ಓಲೈಸಲು ಜನವರಿ 8 ರಂದು ಚಿತ್ರದುರ್ಗದಲ್ಲಿ ಎಸ್‌ಸಿ/ಎಸ್‌ಟಿ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

“ಡಬಲ್ ಎಂಜಿನ್ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಜನರು, ವಿಶೇಷವಾಗಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಸೇರಿದವರು ಸಂಕಷ್ಟ ಅನುಭವಿಸುತ್ತಿದ್ದಾರೆ. ನೋಟು ಅಮಾನ್ಯೀಕರಣದ ನಂತರ ಜನರು ತಮ್ಮ ಕೊಳ್ಳುವ ಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತುಮಕೂರಿನಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದರು.

“ಎಸ್‌ಸಿ/ಎಸ್‌ಟಿ/ಒಬಿಸಿಗಳು ಕ್ರಮೇಣ ಪಕ್ಷದಿಂದ ದೂರ ಸರಿದ ಕಾರಣ ಕಾಂಗ್ರೆಸ್ ಹೈಕಮಾಂಡ್ ಸಂಕಷ್ಟದಲ್ಲಿದೆ ಎಂದು ಅರಿತುಕೊಂಡಿದೆ. ಕರ್ನಾಟಕದಲ್ಲಿ ಎಸ್‌ಸಿ/ಎಸ್‌ಟಿಗಳು ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಚಿತ್ರದುರ್ಗ ಸಮಾವೇಶವು ಸಮುದಾಯದ ಸದಸ್ಯರು ಪಕ್ಷದೊಂದಿಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com