'ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ'

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
ಎಸ್.ಎಂ ಕೃಷ್ಣ
ಎಸ್.ಎಂ ಕೃಷ್ಣ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್‌ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.

ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ಅವರು ಬುಧವಾರ ಹೇಳಿದ್ದರು. ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಯ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. ‘ನನಗೀಗ 90 ವರ್ಷ ವಯಸ್ಸು ಆಗಿದ್ದು, ಇದರ ಅರಿವು ನನಗಿದೆ. 90 ವರ್ಷದ ನಾನು 50 ವರ್ಷದವನಂತೆ ನಟಿಸಲು ಸಾಧ್ಯವಿಲ್ಲ. ಆದ್ದರಿಂದ ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ’ ಎಂದು ಅವರು ತಿಳಿಸಿದ್ದರು.

ಬಿಜೆಪಿ ಹೈಕಮಾಂಡ್ ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲೇ ಅತಿ ಹೆಚ್ಚು ಸೀಟುಗಳನ್ನ ಗೆಲ್ಲಲು ಮುಂದಾಗಿದೆ. ಈ ಸಂದರ್ಭದಲ್ಲಿ ಎಸ್‌.ಎಂ.ಕೃಷ್ಣ ಅವರ ಈ ನಡೆ ನಿಜಕ್ಕೂ ಅಚ್ಚರಿ ಮೂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com