ವಿರೋಧ ಪಕ್ಷಗಳನ್ನು ಎದುರಿಸಿ ಹೇಗೆ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತು: ಎಚ್.ಡಿ ದೇವೇಗೌಡ

ರಾಜ್ಯದಲ್ಲಿ ವಿರೋಧ ಪಕ್ಷಗಳನ್ನು ಹೇಗೆ ಎದುರಿಸಿ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ಹೇಳಿದ್ದಾರೆ.
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ
Updated on

ಹಾಸನ: ರಾಜ್ಯದಲ್ಲಿ ವಿರೋಧ ಪಕ್ಷಗಳನ್ನು ಹೇಗೆ ಎದುರಿಸಿ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಬಲ ವಿರೋಧ ಪಕ್ಷಗಳ ನಡುವೆಯೂ ವಿಧಾನಸಭೆ, ಎಂಪಿ, ಎಂಎಲ್ಸಿ ಚುನಾವಣೆಯಲ್ಲಿ ಹೆಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಅವರು  ಗೆಲುವು ಸಾಧಿಸಿದ್ದಾರೆ ಎಂದು ದೇವೇಗೌಡ ತಿಳಿಸಿದ್ದಾರೆ.

ತಮ್ಮ ಪುತ್ರ ಮಾಜಿ ಸಿಎಂ ಎಚ್‌ ಡಿ ಕುಮಾರ ಸ್ವಾಮಿ ಅವರ ರಾಜಕೀಯ ಹೇಳಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಚ್.ಡಿ.ಕುಮಾರಸ್ವಾಮಿ ಕೇವಲ ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ಮಾತನಾಡುತ್ತಾರೆ ಎಂದಿದ್ದಾರೆ.

ಹಾಸನ ಜಿಲ್ಲೆಯಲ್ಲಿ ನಡೆಯುವ ಪಂಚರತ್ನ ಯಾತ್ರೆ ಹಾಗೂ ರಾಜ್ಯಾದ್ಯಂತ ಚುನಾವಣಾ ಪ್ರಚಾರದ ವೇಳೆ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಆಗಮಿಸಲಿದ್ದಾರೆ. ಪಂಚರತ್ನ ರ್ಯಾಲಿ ಜೆಡಿಎಸ್ ನ ಯಶಸ್ವಿ ಕಾರ್ಯಕ್ರಮವಾಗಿದ್ದು ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದರು.

ಜೆಡಿಎಸ್ ತೊರೆಯಲು ಮುಂದಾಗಿರುವ ಪಕ್ಷದ ಶಾಸಕರಾದ ಎ.ಟಿ.ರಾಮಸ್ವಾಮಿ ಮತ್ತು ಕೆ.ಎಂ.ಶಿವಲಿಂಗೇಗೌಡ ಅವರ ವಿರುದ್ಧ ಮೂರ್ಖತನದ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶಾಸಕರು ಮತ್ತು ಪಕ್ಷದ ನಾಯಕರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ತೀರ್ಮಾನಕ್ಕೆ ಬರುವುದು ಉತ್ತಮ ಎಂದು ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com