'ಸಿದ್ದು ನಿಜ ಕನಸುಗಳು': ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ನಿಂದ ತಡೆ
ಬೆಂಗಳೂರು: 'ಸಿದ್ದು ನಿಜ ಕನಸುಗಳು" ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆ ನೀಡಿದೆ. "ಸಿದ್ದು ನಿಜ ಕನಸುಗಳು ಪುಸ್ತಕವನ್ನು ಇಂದು ನಗರದ ಟೌನ್ ಹಾಲ್ ನಲ್ಲಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿತ್ತು. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಈ ಸಂಬಂಧ ಡಾ. ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನಗರದ 60ನೇ ಸಿಸಿಹೆಚ್ ನ್ಯಾಯಾಲಯ ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಪ್ರತಿವಾದಿಗಳಾಗಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದೆ.
ಕೆಪಿಸಿಸಿ ಕಾನೂನು ವಿಭಾಗದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅರ್ಜಿದಾರರ ಪರ ವಾದ ಮಂಡಿಸಿದರು. ಇದಕ್ಕೂ ಮುನ್ನ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆ ಹತ್ತಿರವಿರುವಂತೆಯೇ ಬಿಜೆಪಿ ಇಂತಹ ಕುತಂತ್ರ ಮಾಡಲು ಮುಂದಾಗಿದೆ. ನಾನು ಹಿಂದೂ ಆದರೆ ಹಿಂದೂತ್ವ ವಿರೋಧಿ. ಪುಸ್ತಕದ ಮೂಲಕ ತಮ್ಮ ತೇಜೋವಧೆಗೆ ಮುಂದಾಗಿರುವುದಾಗಿ ಆರೋಪಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ