ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನಾಗವಾರ ಬಳಿ ಮಂಗಳವಾರ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ತಾಯಿ ಹಾಗೂ ಎರಡು ವರ್ಷದ ಮಗು ಮೃತಪಟ್ಟಿದ್ದು, ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ನಾಗವಾರ ಬಳಿ ಮಂಗಳವಾರ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ತಾಯಿ ಹಾಗೂ ಎರಡು ವರ್ಷದ ಮಗು ಮೃತಪಟ್ಟಿದ್ದು, ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರಿನ ನವಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಒತ್ತಾಯಿಸಿದ್ದಾರೆ.

"ಕರ್ನಾಟಕ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಇದು ಕಳಪೆ ಕಾಮಗಾರಿಗೆ ಸ್ಪಷ್ಟ ಉದಾಹರಣೆಯಾಗಿದೆ. ರಾಜ್ಯ ಸರ್ಕಾರದ ಕಳಪೆ ಕಾಮಗಾರಿಯಿಂದ ಬೆಂಗಳೂರು ಮತ್ತು ರಾಜ್ಯದ ಜನ ಬೇಸತ್ತಿದ್ದಾರೆ" ಎಂದು ಶಾಸಕಿ ಸೌಮ್ಯಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿ: ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ರಾಡ್ ಗಳು ಬಿದ್ದು ತಾಯಿ, ಮಗು ಸಾವು

"ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಹಿಳೆ ಮತ್ತು ಮಗುವಿನ ಮೇಲೆ ಬಿದ್ದಿರುವುದು ತುಂಬಾ ಆಘಾತಕಾರಿ. ಇಲ್ಲಿಯವರೆಗೆ ಜನ ರಸ್ತೆ ಗುಂಡಿಗಳಿಗೆ ಬಲಿಯಾಗುತ್ತಿದ್ದರು. ಈಗ ಪಿಲ್ಲರ್ ಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.  ಇದು ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರಕ್ಕೆ ಸ್ಪಷ್ಟ ಉದಾಹರಣೆಯಾಗಿದೆ" ಎಂದು ರೆಡ್ಡಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com