ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

'ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ರಾಜಕೀಯ ನಿವೃತ್ತಿ, ಹಿಟ್ಲರ್ ನಂತೆ ಮೆರೆಯುವ ಮೋದಿಗೆ ಜನ ಬುದ್ದಿ ಕಲಿಸುತ್ತಾರೆ': ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರ ಮಾತುಗಳು ಪುಂಖಾನುಪುಂಖವಾಗಿ ಹೊರಬರುತ್ತಿವೆ. ಕಾಂಗ್ರೆಸ್​ ಪ್ರಜಾಧ್ವನಿ ಬಸ್ ಯಾತ್ರೆ ಪ್ರಚಾರ ಭರಾಟೆ ಜೋರಾಗಿದೆ. 

ಹಾಸನ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ನಾಯಕರ ಮಾತುಗಳು ಪುಂಖಾನುಪುಂಖವಾಗಿ ಹೊರಬರುತ್ತಿವೆ. ಕಾಂಗ್ರೆಸ್​ ಪ್ರಜಾಧ್ವನಿ ಬಸ್ ಯಾತ್ರೆ ಪ್ರಚಾರ ಭರಾಟೆ ಜೋರಾಗಿದೆ. 

ಇಂದು ಜೆಡಿಎಸ್ ನ ಭದ್ರಕೋಟೆ ಹಾಸನದಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಂಪ್ರದಾಯದಂತೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಮೇಲೆ ವಾಗ್ದಾಳಿ ಮುಂದುವರಿಸಿದ್ದಾರೆ. ಮತ್ತೊಮ್ಮೆ ತಮ್ಮ ರಾಜಕೀಯ ನಿವೃತ್ತಿ ಬಗ್ಗೆಯೂ ಮಾತನಾಡಿದ್ದಾರೆ.

ಇಂದು ಹಾಸನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬಂದು ಜನತೆಗೆ ನೀಡಿದ ಆಶ್ವಾಸನೆಯಂತೆ ನಡೆದುಕೊಳ್ಳದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಹಾಸನದ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಲೇಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತವಾಗಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ. ಕುಟುಂಬದ ಹಿರಿಯ ಮಹಿಳೆಗೆ ತಿಂಗಳಿಗೆ 2 ಸಾವಿರ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್​ ವಿದ್ಯುತ್ ಕೊಡುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ಪ್ರಧಾನಿ ಮೋದಿ ಹಿಟ್ಲರ್: ಉಡುಪಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯುತ್ತಿದ್ದು, ನಗರದ ಮಿಷನ್ ಕಂಪೌಂಡ್‌ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅಲ್ಲಿ ಕೂಡ  ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದರು. ಪ್ರಧಾನಿ ನರೇಂದ್ರ ಮೋದಿಯನ್ನು ಸಿದ್ದರಾಮಯ್ಯ ಸರ್ವಾಧಿಕಾರಿಗೆ ಹೋಲಿಸಿದರು. ಹಿಟ್ಲರ್ ಸ್ವಲ್ಪ ದಿನ ಮೆರೆದ ಆಮೇಲೆ ಏನಾಯ್ತು..? ಮುಸಲೋನಿಯ ಕಥೆ ಏನಾಯ್ತು? ಫ್ರ್ಯಾಂಕೋ ಏನಾದ, ಅದೇ ರೀತಿ ಪ್ರಧಾನಿ ಮೋದಿ ಸಹ ಸ್ವಲ್ಪ ದಿನ ಮೆರೆಯುತ್ತಾರೆ, ಆಮೇಲೆ ಅಧಿಕಾರದಿಂದ ಇಳಿಲೇಬೇಕು. ಜನ ಬುದ್ಧಿ ಕಲಿಸುತ್ತಾರೆ ಎಂದು ಟೀಕೆ ಮಾಡಿದ್ದಾರೆ. ಅಲ್ಲದೆ, ಮೋದಿ ದೇಶದ ಪ್ರಧಾನಿಯಾಗಿ ಅವರು ರಾಜ್ಯಕ್ಕೆ ಬರಬಹುದು. ಆದರೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಬಂದರೆ ಅಸಾಧ್ಯ. ಕರ್ನಾಟಕಕ್ಕೆ 100 ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ರಾಜ್ಯದ ಜನಕ್ಕೆ ಬಿಜೆಪಿ ಮೇಲೆ ಭ್ರಮನಿರಸನವಾಗಿದೆ ಎಂದು ಕಟುವಾದ ಶಬ್ದಗಳಲ್ಲಿ ಟೀಕೆ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com