ಸಿದ್ದು-ಡಿಕೆಶಿ ಬಣ ಬಡಿದಾಟ: 'ಪ್ರಜಾಧ್ವನಿ' ಯಾತ್ರೆ ನಂತರ ಕಾಂಗ್ರೆಸ್‌ಗೆ ಸಂಕಷ್ಟ; ಟಿಕೆಟ್ ಸಿಗದಿದ್ದರೆ ಆಕಾಂಕ್ಷಿಗಳ ಬಂಡಾಯ ಖಚಿತ!

ಜನವರಿ 29 ರಂದು ತನ್ನ ‘ಪ್ರಜಾಧ್ವನಿ’ ಬಸ್ ಯಾತ್ರೆಯ ಮೊದಲ ಹಂತದ ಮುಕ್ತಾಯದ ನಂತರ ಫೆಬ್ರವರಿ ಎರಡನೇ ವಾರದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ
ಸಿದ್ದರಾಮಯ್ಯ, ವೈಎಸ್ ವಿ ದತ್ತ ಮತ್ತು ಡಿ.ಕೆ ಶಿವಕುಮಾರ್
ಸಿದ್ದರಾಮಯ್ಯ, ವೈಎಸ್ ವಿ ದತ್ತ ಮತ್ತು ಡಿ.ಕೆ ಶಿವಕುಮಾರ್
Updated on

ಬೆಂಗಳೂರು: ಜನವರಿ 29 ರಂದು ತನ್ನ ‘ಪ್ರಜಾಧ್ವನಿ’ ಬಸ್ ಯಾತ್ರೆಯ ಮೊದಲ ಹಂತದ ಮುಕ್ತಾಯದ ನಂತರ ಫೆಬ್ರವರಿ ಎರಡನೇ ವಾರದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಲು ಕಾಂಗ್ರೆಸ್ ನಿರ್ಧರಿಸಿದೆ

ಈಗಾಗಲೇ ಕೆಲವು ಪ್ರಮುಖ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಲಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರು ಇತರ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಗೆ ಒಲವು ತೋರುವ ಸಾಧ್ಯತೆಯಿದೆ. ಹೀಗಾಗಿ ಟಿಕೆಟ್ ಬಯಸಿದವರನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಬಸ್ ಯಾತ್ರೆ ಮುಗಿದ ನಂತರ ಪಕ್ಷದಲ್ಲಿಎರಡು ಕಾರಣಗಳಿಗಾಗಿ ಸಮಸ್ಯೆ ಆರಂಭವಾಗುತ್ತದೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಯ್ದ ಸ್ಥಾನಗಳ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ, ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಮಾಡುವಾಗ ಭಿನ್ನಾಭಿಪ್ರಾಯಗಳು ಸ್ಫೋಟಗೊಳ್ಳಬಹುದು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರ ನಡುವೆ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ ಎಂದು ಹೇಳಿದ್ಜಾರೆ. ಫೆಬ್ರವರಿ 3 ರಿಂದ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದಲ್ಲಿ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಬಸ್ ಯಾತ್ರೆ ನಡೆಸಲಿದ್ದು, ಶಿವಕುಮಾರ್ ಹಳೇ ಮೈಸೂರಿನಿಂದ ತಮ್ಮದೇ ಯಾತ್ರೆ ಆರಂಭಿಸಲಿದ್ದಾರೆ.

224 ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಅಭ್ಯರ್ಥಿಯಾಗುವ ನಿರೀಕ್ಷೆಯಲ್ಲಿ ಸುಮಾರು 1,350 ಆಕಾಂಕ್ಷಿಗಳು ಶುಲ್ಕ ಪಾವತಿಸಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಕೆಲವರು ಬೇರೆಯವರಿಗೆ ಬದಲಾಗುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕತ್ವವು ಉಂಟಾಗುವ ಯಾವುದೇ ಬಂಡಾಯವನ್ನು ಹೇಗೆ ಶಮನಗೊಳಿಸುತ್ತದೆ ಎಂಬುದು ಕುತೂಹಲಕಾರಿಯಾಗಿದೆ.  ಕಾಂಗ್ರೆಸ್‌ನಲ್ಲಿ ಟಿಕೆಟ್ ಕೈ ತಪ್ಪಿದರೆ, ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ಅವಕಾಶಗಳು ಹಾಳಾಗುತ್ತವೆ.

ಫೆಬ್ರವರಿ 2 ರಂದು 36 ಸದಸ್ಯರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು,, ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದ ನಂತರ ಫೆಬ್ರವರಿ 15 ರೊಳಗೆ ಸುಮಾರು 100 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ. ಮುಳಬಾಗಲು ಕ್ಷೇತ್ರದಿಂದ ಶಿವಕುಮಾರ್ ಅವರ ಆಪ್ತ, ಸ್ವತಂತ್ರ ಶಾಸಕ ಎಚ್.ನಾಗೇಶ್ ಈ ಬಾರಿ ಮಹದೇವಪುರದಿಂದ ಸ್ಪರ್ಧಿಸಲಿದ್ದಾರೆ. ಆದರೆ, ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ನಾಯಕರು ಬಂಡಾಯ ಏಳುವ ಸಾಧ್ಯತೆ. ಕಡೂರಿನಲ್ಲಿ ಸಿದ್ದರಾಮಯ್ಯ ಅವರ ಆಪ್ತ ವೈಎಸ್‌ವಿ ದತ್ತ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ತುಮಕೂರು ನಗರದಲ್ಲಿ ತಲಾ 2 ಲಕ್ಷ ರೂಪಾಯಿ ನೀಡಿ ಐವರು ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ, ಆದರೆ ಕಾಂಗ್ರೆಸ್ ನಾಯಕರು ಲಿಂಗಾಯತ ಸಮುದಾಯದಿಂದ ಮತ್ತು ಬೇರೆ ಪಕ್ಷದಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.  ಇದು ಇಕ್ಬಾಲ್ ಅಹಮದ್ ಅವರಂತ ಆಕಾಂಕ್ಷಿಗಳನ್ನು ಕೆರಳಿಸಿದೆ. ಅವರು ಹೈಕಮಾಂಡ್ ಅನ್ನು ಸಂಪರ್ಕಿಸಲು ಅವರ ಅಡಿಯಲ್ಲಿ ಒಂದಾಗುವ ಸಾಧ್ಯತೆಯಿದೆ, ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com