ಶಿಸ್ತು ಸಮಿತಿ ನೊಟೀಸ್ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ರೇಣುಕಾಚಾರ್ಯ; ಸುದೀರ್ಘ ಮಾತುಕತೆ

ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್​​ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ ರೇಣುಕಾಚಾರ್ಯ
ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ ರೇಣುಕಾಚಾರ್ಯ
Updated on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ..

ಇದರ ಬೆನ್ನಲ್ಲೇ ಇಂದು (ಶನಿವಾರ) ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್​​ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ನಿನ್ನೆ (ಶುಕ್ರವಾರ) ಬಿಜೆಪಿ ನಾಯಕರರ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುವವರನ್ನು ಕರೆದು ಮಾತನಾಡುವ ಜವಾಬ್ದಾರಿಯನ್ನು ಬಿ.ಎಸ್‌.ಯಡಿಯೂರಪ್ಪ ಅವರಿಗೆ ನೀಡುವ ನಿರ್ಣಯವನ್ನು ಕೈಗೊಂಡಿತ್ತು.

ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು' ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದರು.

ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com