ನಮ್ಮ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಲೇವಡಿ

ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ. ನಮ್ಮ ರಾಜ್ಯದಲ್ಲಿ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆ ನೋಡಿ ಶಾಕ್ ಆಗಿದೆ. ನಮ್ಮ ರಾಜ್ಯದಲ್ಲಿ ರಾಜ್ಯದಲ್ಲಿ ಯಾವ ಅಜಿತ್ ಪವಾರ್ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿಯವರು ರಾಜ್ಯದಲ್ಲಿರುವುದು ಸಮ್ಮಿಶ್ರ ಸರ್ಕಾರ ಅಂತಾರೆ. ಮಹಾರಾಷ್ಟ್ರದಲ್ಲಿ ದಿಢೀರ್​ ರಾಜಕೀಯ ಬದಲಾವಣೆಯಾಗಿದೆ. ನಿನ್ನೆ ಅಜಿತ್ ಪವಾರ್​ ಮಹಾರಾಷ್ಟ್ರ ಸರ್ಕಾರ ಬೆಂಬಲಿಸಿದ್ದಾರೆ. ಕರ್ನಾಟಕದಲ್ಲಿ ಯಾವ ಅಜಿತ್ ಪವಾರ್ ಬರುತ್ತಾರೋ ಗೊತ್ತಿಲ್ಲ. ಕರ್ನಾಟಕದ ಬಗ್ಗೆಯೂ ನನಗೆ ಆತಂಕ ಶುರುವಾಗಿದೆ ಎಂದರು.

ಇದೇ ವೇಳೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಮಾಜಿ ಸಿಎಂ, ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಾಸಕರ ಶಿಫಾರಸ್ಸು ತಂದರೇ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಹೇಳುತ್ತಿದ್ದಾರೆ. ದುಡ್ಡು ಕೊಟ್ಟಿರುವವರು ಸಾಕ್ಷಿ ಕೊಡುತ್ತರಾ? ದುಡ್ಡು ಕೊಟ್ಟವರಿಗೆ ಕೆಲಸ ಆಗಬೇಕು ಹಾಗಾಗಿ ಯಾರು ಸಾಕ್ಷಿ ಕೊಡಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಐಸಿಯುಗೆ ಹೋಗುವ ಕಾಲ ಬರುತ್ತೆ. ಐಸಿಯು, ವೆಂಟಿಲೇಟರ್ ಮೇಲೆ ಈ ಸರ್ಕಾರ ನಡೆಯಬಹುದು. ಆರ್ಥಿಕ ಪರಿಸ್ಥಿತಿ ಆ ಮಟ್ಟಕ್ಕೆ ಹೋಗಲಿದೆ. ಮುಂದಿನ 5 ವರ್ಷಕ್ಕೆ ಏನು ಕೊಡಬೇಕೆಂಬ ಆತ್ಮವಿಶ್ವಾಸವೇ ಇಲ್ಲ. ರಾಜ್ಯಪಾಲರ ಭಾಷಣದ ವೇಳೆ ಶಾಸಕರು ಮೇಜು ಕುಟ್ಟಿದ್ದು ನೋಡಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com