ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ; ಇಂದಿನಿಂದ ಬಿಜೆಪಿ ಪ್ರತಿಭಟನೆ

ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ಐದು ಚುನಾವಣಾ ಖಾತರಿಗಳನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಬಿಜೆಪಿ
ಬಿಜೆಪಿ
Updated on

ಬೆಂಗಳೂರು: ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ಐದು ಚುನಾವಣಾ ಖಾತರಿಗಳನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಬಿಜೆಪಿ ಮೂಲಗಳ ಪ್ರಕಾರ, ಭರವಸೆಗಳ ಪರಿಣಾಮಕಾರಿ ಅನುಷ್ಠಾನವನ್ನು ಕೋರಿ ಮಂಗಳವಾರದಿಂದ ಅಧಿವೇಶನ ಮುಗಿಯುವ ಜುಲೈ 14 ರವರೆಗೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕಾಂಗ ಪಕ್ಷವು ವಿಧಾನಸಭೆಯೊಳಗೆ ಧರಣಿ ನಡೆಸಿದರೆ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿವಿ ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಬಿಜೆಪಿ ತನ್ನ ಯೋಜನೆಗಳಂತೆ ನಡೆದುಕೊಂಡರೆ, ವಿಧಾನಸಭೆ ಅಧಿವೇಶನದ ಎರಡನೇ ದಿನ ಬಿರುಸಿನ ವಾತಾವರಣ ನಿರ್ಮಾಣವಾಗುವ ನಿರೀಕ್ಷೆ ಇದೆ.

ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ 5 ಕೆಜಿ ಧಾನ್ಯಗಳನ್ನು ಒದಗಿಸುವ 'ಅನ್ನ ಭಾಗ್ಯ' ಯೋಜನೆ ಅನುಷ್ಠಾನದ ಬಗ್ಗೆ ಕೇಸರಿ ಪಕ್ಷವು ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದೆ.

ಅಗತ್ಯ ಪ್ರಮಾಣದ ಅಕ್ಕಿ ಅಲಭ್ಯತೆಯಿಂದಾಗಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಯೋಜನೆಗೆ ನೀಡಿದ್ದ ಜುಲೈ 1ರ ಗಡುವನ್ನು ತಪ್ಪಿಸಿದ್ದಾರೆ ಮತ್ತು ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪ್ರತಿ ಕೆ.ಜಿ.ಗೆ 34 ರೂ.ನಂತೆ ಹಣ ಜಮೆ ಮಾಡಲು ನಿರ್ಧರಿಸಿದ್ದಾರೆ.

ಕಳೆದ ತಿಂಗಳು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಭಾರತೀಯ ಆಹಾರ ನಿಗಮವು (ಎಫ್‌ಸಿಐ) ನೇರವಾಗಿ ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ನಿಲ್ಲಿಸಿತು.

ಮಹಿಳೆಯರಿಗೆ ಐಷಾರಾಮಿ ಅಲ್ಲದ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡುವ 'ಶಕ್ತಿ' ಯೋಜನೆಯನ್ನು ಈಗಾಗಲೇ ಪ್ರಾರಂಭಿಸಲಾಗಿದ್ದು, ಎಪಿಎಲ್/ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರಿಗೆ ಮಾಸಿಕ 2,000 ರೂ.ಗಳನ್ನು ನೀಡುವ 'ಗೃಹ ಲಕ್ಷ್ಮಿ' ಯೋಜನೆ ಆಗಸ್ಟ್‌ನಲ್ಲಿ ಜಾರಿಗೆ ಬರಲಿದೆ.

ಗೃಹ ಜ್ಯೋತಿ ಯೋಜನೆಯ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ನ ಭರವಸೆಯು ಆಗಸ್ಟ್‌ನಿಂದ ಬಿಲ್‌ಗಳಲ್ಲಿ ಪ್ರತಿಬಿಂಬಿಸಲು ಪ್ರಾರಂಭಿಸುತ್ತದೆ. ಅದೇ ರೀತಿ, 2022-23ರಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೋಮಾದಾರರಿಗೆ 1,500 ರೂ. ನೀಡುವ ಯುವ ನಿಧಿ ಯೋಜನೆ ಜಾರಿಗೆ ಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com