ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಮತ್ತು ರಾಜ್ಯಾಧ್ಯಕ್ಷ ನೇಮಕ ವಿಚಾರ: ಶಾಸಕರ ಅಭಿಪ್ರಾಯ ಸಂಗ್ರಹಿಸಿದ ದೆಹಲಿ ನಾಯಕರು

ಕರ್ನಾಟಕ ಬಿಜೆಪಿ ವಿರೋಧ ಪಕ್ಷದ ನಾಯಕ (LoP) ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿಯ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ವಿನೋದ್ ತಾವ್ಡೆ ಅವರು ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಬಿಜೆಪಿ ವಿರೋಧ ಪಕ್ಷದ ನಾಯಕ (LoP) ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಬಿಜೆಪಿಯ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ವಿನೋದ್ ತಾವ್ಡೆ ಅವರು ನಿನ್ನೆ ಮಂಗಳವಾರ ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದರು. ಬಿಜೆಪಿ ಕೇಂದ್ರ ನಾಯಕತ್ವವು ಈ ಎರಡೂ ಸ್ಥಾನಗಳಿಗೆ ಇನ್ನೊಂದೆರಡು ದಿನಗಳಲ್ಲಿ ಹೆಸರುಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

ವೀಕ್ಷಕರು ದೆಹಲಿಗೆ ತೆರಳುವ ಮೊದಲು ಹಲವಾರು ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರೊಂದಿಗೆ ಸರಣಿ ಸಭೆಗಳನ್ನು ನಡೆಸಿದರು. ದೆಹಲಿಗೆ ತೆರಳಿದ ನಂತರ ತಮ್ಮ ವರದಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಲ್ಲಿಸಲಿದ್ದಾರೆ. ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ನಡ್ಡಾ ಚರ್ಚಿಸಲಿದ್ದು, ಇಂದು ಅಥವಾ ನಾಳೆ ಹೆಸರು ಘೋಷಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಮೇಲ್ಮನೆಯಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರೋಧ ಪಕ್ಷದ ನಾಯಕನಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ತೆಲಂಗಾಣ, ಪಂಜಾಬ್, ಜಾರ್ಖಂಡ್ ಮತ್ತು ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರನ್ನು ಬಿಜೆಪಿ ನಿನ್ನೆ ಪ್ರಕಟಿಸಿದ್ದು, ಕೇಂದ್ರ ವೀಕ್ಷಕರು ರಾಜ್ಯ ಘಟಕದ ಮುಖ್ಯಸ್ಥರ ನೇಮಕದ ಬಗ್ಗೆ ರಾಜ್ಯ ನಾಯಕರ ಅಭಿಪ್ರಾಯವನ್ನು ಸಂಗ್ರಹಿಸಿದರು, ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಚುನಾವಣೆಗೆ ಮುನ್ನವೇ ಕೊನೆಗೊಂಡು ಅದನ್ನು ವಿಸ್ತರಿಸಲಾಗಿತ್ತು. ರಾಜ್ಯಾಧ್ಯಕ್ಷ  ಸ್ಥಾನಕ್ಕೆ ಹಲವು ನಾಯಕರ ಹೆಸರು ಕೇಳಿಬರುತ್ತಿರುವಾಗಲೇ ಕೇಂದ್ರ ನಾಯಕತ್ವ ಜಾತಿ ವಿಚಾರದಲ್ಲಿ ಸಮತೋಲನ ಕಾಯ್ದುಕೊಳ್ಳಲು ಯತ್ನಿಸುತ್ತಿದ್ದು, ಈ ಎರಡು ನೇಮಕಾತಿಗಳನ್ನು ಮಾಡುತ್ತಿದೆ.

ವೀಕ್ಷಕರು ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಎರಡು ಹುದ್ದೆಗಳ ಹೆಸರನ್ನು ದೆಹಲಿಯಲ್ಲಿ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಬಿಜೆಪಿ ಎಂಎಲ್‌ಸಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ. ಸಮರ್ಥ ಪ್ರತಿಪಕ್ಷ ನಾಯಕನನ್ನು ನೇಮಿಸುವ ಅಗತ್ಯವನ್ನು ವೀಕ್ಷಕರಿಗೆ ತಿಳಿಸಿದ್ದೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com