ರಾಜಕೀಯ

ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ 'ಲುಲು' ಮಾಡಬಹುದಾ? ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!

ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ 'ಲುಲು' ಮಾಡಬಹುದಾ? ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!
ಸಿದ್ದರಾಮಯ್ಯ ಮತ್ತು ಡಿ,ಕೆ ಶಿವಕುಮಾರ್
Published On :

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜೆಡಿಎಸ್ ನ ಯತೀಂದ್ರ ಸರ್ವೀಸ್ ಟ್ಯಾಕ್ಸ್ ಆರೋಪಕ್ಕೆ ಕಾಂಗ್ರೆಸ್ ಕೆರಳಿ ಕೆಂಡವಾಗಿದೆ, ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ಕುಮಾರಸ್ವಾಮಿ ಅವರಿಗೆ ತಿರುಗೇಟು  ನೀಡಿದೆ.

ವೆಸ್ಟ್​ ಎಂಡ್​​ ಹೋಟೆಲ್​ನಲ್ಲಿ 1 ದಿನದ ಬಾಡಿಗೆ ಎಷ್ಟು ಕುಮಾರಸ್ವಾಮಿಯವರೇ? ಅಲ್ಲಿ ಖಾಯಂ ಅಡ್ಡ ತೆರೆದಿದ್ದೀರಿ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ಹೋಟೆಲ್​ಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ ‘ಕೆಎಸ್​ಟಿ’ ಸಂಗ್ರಹದ ಹಣ ಬಳಸುತ್ತಿದ್ದೀರಾ? ‘KST ಕುಮಾರ್’ ಅವರು ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್​ ಪರೋಕ್ಷವಾಗಿ ಕುಮಾರಸ್ವಾಮಿ ಸರ್ವಿಸ್ ಟ್ಯಾಕ್ಸ್ ಎಂದು ತಿರುಗೇಟು ನೀಡಿದೆ.

ಇನ್ನು ಕಾಂಗ್ರೆಸ್​ ಕೆಎಸ್​ಟಿ ಟ್ವೀಟ್​ಗೆ ಜೆಡಿಎಸ್​ ಸಹ ಸರಣಿ ಟ್ವೀಟ್​ ಮಾಡಿದ್ದು, ವೆಸ್ಟ್‌ ಎಂಡ್‌ ಲೆಕ್ಕ ಇರಲಿ, ‘ಸಿಎಂ ಟಿಪ್ಪಣಿ ಬಿಕರಿ’ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ. ಇದ್ಯಾವ ಸೀಮೆ ಅರ್ಥಶಾಸ್ತ್ರ? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ. ಪಾಪ.. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎಂದು ಟಾಂಗ್ ಕೊಟ್ಟಿದೆ.

'ವೆಸ್ಟ್‌ʼಎಂಡ್‌ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ? ಒಂದು ವೇಳೆ ಮಾಡಬಹುದಾದರೆ, ನಿಮ್ಮ 'ಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಕಾಲೆಳೆದಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು #YstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ‘ಅವಿವೇಕ‘ ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ.

ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ಹೊಸ ವರಸೆ ಮತ್ತು ಹೊಸ ಕಸವರಿಕೆ ಎಂದು ಕಾಂಗ್ರೆಸ್​ ವಿರುದ್ಧ ಜೆಡಿಎಸ್​ ಸರಣಿ ಟ್ವೀಟ್​ ಮೂಲಕ ಕಿಡಿಕಾರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.