ಪ್ರಜಾಪ್ರಭುತ್ವದ ಕಗ್ಗೊಲೆ, ನ್ಯಾಯಕ್ಕೆ ಜಯ ಸಿಗದಿರುವುದು ದುರದೃಷ್ಟಕರ: ಡಿ ಕೆ ಶಿವಕುಮಾರ್

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿರುವ ತೀರ್ಪಿನ ಸಂಬಂಧ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬಜೆಟ್ ಅಧಿವೇಶನಕ್ಕೂ ಮುವ್ವ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಕ್ಕೆ ಜಯ ಸಿಗದಿರುವುದು ಅತ್ಯಂತ ದುರದೃಷ್ಟಕರ. ಪ್ರಜಾಪ್ರಭುತ್ವದ ಕೊಲೆಯಾಗಿದೆ. ಆದರೂ, ಇಡೀ ದೇಶ ಮತ್ತು ವಿರೋಧ ಪಕ್ಷಗಳು ರಾಹುಲ್ ಗಾಂಧಿಯ ಬೆಂಬಲಕ್ಕೆ ನಿಂತಿವೆ.

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ದೇಶಾದ್ಯಂತ ಹೋರಾಟ ನಡೆಸುತ್ತಿರುವ ಮಹಾನ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕರಿಗೆ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಸಂಸತ್ತಿನಲ್ಲಿ ನಿರ್ಬಂಧಿಸಲು ಬಯಸುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಇದಕ್ಕೆಲ್ಲಾ ಕುಗ್ಗುವುದಿಲ್ಲ. ಅವರು ಮತ್ತಷ್ಟು ಬಲಶಾಲಿಯಾಗಿ ಹೋರಾಟ ನಡೆಸುತ್ತಾರೆ ಎಂದು ಶಿವಕುಮಾರ್ ಹೇಳಿದ್ದಾರೆ.

ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು’ ಎಂದಿದ್ದ ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿನ ಶಿಕ್ಷೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದೆ.

ಬಿಜೆಪಿಯ  ಕುತಂತ್ರವನ್ನು ನಾವು ತೀವ್ರವಾಗಿ ಕಂಡಿಸುತ್ತಿದ್ದೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದನ್ನ ಕಾರ್ಯಕರ್ತರ ಮೂಲಕ ಮೊಟಕುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಈ ದೇಶದ ಐಕ್ಯತೆಗೆ, ಈ ದೇಶದ ಸಮಗ್ರತೆಗೆ ಭಾರತ್ ಜೋಡೋ ಯಾತ್ರೆ ಮಾಡಿದರು. ಇಂದು ಮಧ್ಯಾಹ್ನ 3.30ಕ್ಕೆ ಎಲ್ಲಾ ಕಾಂಗ್ರೆಸ್ ಶಾಸಕರು ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com