ಗುಜರಾತ್ ಹೈಕೋರ್ಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನ್ಯಾಯಾಂಗ ನಿಂದನೆಯಾಗುತ್ತದೆ: ಮಾಜಿ ಸಿಎಂ ಬೊಮ್ಮಾಯಿ

ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆಯಾಗಲಿದೆ...
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಪ್ರಶ್ನಿಸಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ರಾಹುಲ್ ಗಾಂಧಿಯನ್ನು ಬೆಂಬಲಿಸಿ ಮತ್ತು ಗುಜರಾತ್ ಹೈಕೋರ್ಟ್ ವಿರುದ್ಧ ಕಾಂಗ್ರೆಸ್ ಜುಲೈ 12 ರಂದು ದೇಶಾದ್ಯಂತ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆಗೆ ಕರೆ ನೀಡಿದೆ.

ಇಂದು ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಗುಜರಾತ್ ಹೈಕೋರ್ಟ್ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ ನ್ಯಾಯಾಂಗ ನಿಂದನೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com