2024ರ ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲುವುದೇ ಟಾರ್ಗೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್

2024ರ ಲೋಕಸಭೆ ಚುನಾವಣೆಯಲ್ಲಿ ಸುಮಾರು 20 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಣ ತೊಟ್ಟಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಸಲೀಂ ಅಹ್ಮದ್
ಸಲೀಂ ಅಹ್ಮದ್

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಸುಮಾರು 20 ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಣ ತೊಟ್ಟಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ಸಲೀಂ ಅಹ್ಮದ್, ಮುಂಬರುವ ಬಿಬಿಎಂಪಿ ಮತ್ತು ಜಿಪಂ ಚುನಾವಣೆಯಲ್ಲೂ ಪಕ್ಷ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದರು.

2019 ರ ಚುನಾವಣೆಯಲ್ಲಿ, ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು. ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ಗೆಲುವು ಕಂಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ತನಗೆ ದೊರೆತ ಭಾರೀ ಬೆಂಬಲವನ್ನು ಲೋಕಸಭೆಗೆ ವರ್ಗಾಯಿಸಲು ಕಾಂಗ್ರೆಸ್‌ ಈಗ ಹವಣಿಸುತ್ತಿದೆ. ರಾಜ್ಯದ 28 ಸಂಸದೀಯ ಸ್ಥಾನಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದೆ, ಬಿಜೆಪಿ 25 ಸ್ಥಾನಗಳನ್ನು ಗೆದ್ದಿದೆ. 2014ರಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು.

ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಭ್ರಷ್ಟಾಚಾರದ ವಿಷಯಗಳನ್ನು  ಜನರ ಬಳಿಗೆ ಕೊಂಡೊಯ್ಯುತ್ತೇವೆ.  ಮೋದಿ ಸರ್ಕಾರ ಕಪ್ಪುಹಣ ವಾಪಸಾತಿ ಮತ್ತು ಪ್ರತಿಯೊಬ್ಬರಿಗೆ 15 ಲಕ್ಷ ರೂಪಾಯಿ ನೀಡುವ ಭರವಸೆಗಳನ್ನು ನೀಡಿತು.

ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿತ್ತು, ಆದರೆ ಸರ್ಕಾರ ಆ ಕೆಲಸ ಮಾಡಲಿಲ್ಲ. ರೈತರ ಆದಾಯ ಹೆಚ್ಚಿಸುವ ಭರವಸೆ ನೀಡಿತ್ತು, ಅದನ್ನೂ ಈಡೇರಿಸಲಿಲ್ಲ.  ಆದರೆ ಕಾಂಗ್ರೆಸ್ ತನ್ನ ಖಾತರಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಅಹ್ಮದ್ ಹೇಳಿದರು. ಪರಿಷತ್ತಿಗೆ ಮೂರು ಸದಸ್ಯರ ನಾಮನಿರ್ದೇಶನಗಳ ಕುರಿತು ಕೇಳಲಾದ ಪ್ರಶ್ನೆಗೆ, ಶೀಘ್ರದಲ್ಲೇ ಹೆಸರುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com