ಅಡ್ಜಸ್ಟ್ ಮೆಂಟ್ ರಾಜಕೀಯ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಗುಡುಗು

ನಾನು ಯಾವತ್ತೂ ಅಡ್ಜಸ್ಟ್ ಮೆಂಟ್ ರಾಜಕೀಯ ಮಾಡಿಲ್ಲ. ಎಂದಾದರೂ ಹೊಂದಾಣಿಕೆ ರಾಜಕೀಯ ಮಾಡಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ನಾನು ಯಾವತ್ತೂ ಅಡ್ಜಸ್ಟ್ ಮೆಂಟ್ ರಾಜಕೀಯ ಮಾಡಿಲ್ಲ. ಎಂದಾದರೂ ಹೊಂದಾಣಿಕೆ ರಾಜಕೀಯ ಮಾಡಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಗುಡುಗಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ತೀವ್ರ ವಾಕ್ಸಮರ ನಡೆಯಿತು. ಈ ವೇಳೆ ಸಿದ್ದರಾಮಯ್ಯ ಅವರು, ಯತ್ನಾಳ್ ಅವರೇ ಯಾವುದೇ ಕಾರಣಕ್ಕೂ ನಿಮ್ಮನ್ನು ಪ್ರತಿಪಕ್ಷ ನಾಯಕ ಮಾಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ಯತ್ನಾಳ್ ಅವರು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಸಿಎಂ, ಯತ್ನಾಳ್ ಅವರೇ ಸ್ವಲ್ಪ ಸುಮ್ಮನಿರಿ.... ನೀವು ಉತ್ತಮ ಸಂಸದೀಯ ಪಟು ಅಂದುಕೊಂಡಿದ್ದೇನೆ. ಮಧ್ಯ ಮಧ್ಯ ಎದ್ದು ನಿಂತು ಮಾತನಾಡಿದರೆ ಉತ್ತಮ ಸಂಸದೀಯ ಪಟು ಅನಿಸಿಕೊಳ್ಳುವುದಿಲ್ಲ. ನನಗೆ ಇರುವ ಮಾಹಿತಿ ಪ್ರಕಾರ, ನಿಮ್ಮನ್ನು ಪ್ರತಿಪಕ್ಷ ನಾಯಕ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು.

ಈ ವೇಳೆ ಪ್ರತಿಕ್ರಿಯಿಸಿದ ಯತ್ನಾಳ್ ಅವರು, ನೀವು ಅಡ್ಜೆಸ್ಟ್ ಮೆಂಟ್ ರಾಜಕೀಯ ಮಾಡಿದ್ದೀರಿ ಎಂದು ಸಿಎಂ ಕಾಲೆಳೆಯುವ ಪ್ರಯತ್ನ ಮಾಡಿದರು. ಇದರಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಅವರು, ನನ್ನ ರಾಜಕೀಯ ಜೀವನದಲ್ಲಿ ಎಂದೂ ಹೊಂದಾಣಿಕೆ ರಾಜಕೀಯ ಮಾಡಲಿಲ್ಲ. ನಾನು ಪ್ರತಿಪಕ್ಷದಲ್ಲಿದ್ದಾಗ ಸಚಿವರಾದವರು ಇಲ್ಲಿ ಕೆಲವರು ಇದ್ದಾರೆ, ಅವರ ಮನೆಗೆ ಹೋಗಿದ್ದೆನಾ ಕೇಳಿ. ಹೊಂದಾಣಿಕೆ ರಾಜಕೀಯ ಮಾಡಿದ್ದು ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com