ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಸುದ್ದಿ: ತೇಜಸ್ವಿನಿ ಅನಂತಕುಮಾರ್‌ ಹೇಳಿದ್ದೇನು?

ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ್‌ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.
ತೇಜಸ್ವಿನಿ ಅನಂತ್ ಕುಮಾರ್
ತೇಜಸ್ವಿನಿ ಅನಂತ್ ಕುಮಾರ್

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ್‌ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ಕೆಲ ದಿನಗಳಿಂದ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿಯ ನಡೆಗಳಿಂದ ನೊಂದಿದ್ದಾರಾ? ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಹಾರುತ್ತಾರಾ ಎನ್ನವ ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದವು. ಈಗ ಅವೆಲ್ಲದ್ದಕ್ಕೂ ಅವರು ಟ್ವೀಟ್ ಮೂಲಕ ಬ್ರೇಕ್‍ ಹಾಕಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ  ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತೇಜಸ್ವಿನಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಸುದ್ದಿ ಹಬ್ಬಿತ್ತು.

ಈ ಹಿಂದೆಯೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಮಾಡಿದ್ದ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿತ್ತು. ತಮ್ಮ ಪತಿ ಅನಂತಕುಮಾರ್‌, ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಟ್ವೀಟ್ ಮಾಡಿದ್ದರು.

ವಿಧಾನಸಭೆ ಚುನಾವಣೆ ವೇಳೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಸೇರಿ ಹಲವರು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಶಾಕ್ ಕೊಟ್ಟಿದ್ದರು. ಹೀಗಾಗಿ ಕಳೆದೆರಡು ದಿನಗಳ ಹಿಂದೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಸುದ್ದಿ ಹಬ್ಬಿತ್ತು. ತೇಜಸ್ವಿನಿ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ಜಗದೀಶ್‌ ಶೆಟ್ಟರ್‌ ಮುಖ್ಯ ಸೇತುವೆ ಎನ್ನಲಾಗಿತ್ತು. ಇವೆಲ್ಲ ಊಹಾಪೋಹಗಳಿಗೆ ಇಂದು ತೆರೆ ಬಿದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com