ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನಡೆಯತ್ತ ಎಲ್ಲರ ಚಿತ್ತ!

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಕೆಲವು ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆಯಿದೆ.
ಸೋಮವಾರ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆ
ಸೋಮವಾರ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಭಾರಿ ಅಧಿಕಾರದಿಂದ ಕಿತ್ತೊಗೆಯಲು ವಿಪಕ್ಷಗಳೆಲ್ಲ ಒಗಟ್ಟಿನ ಮಂತ್ರ ಜಪಿಸುತ್ತಿವೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಇಂಗಿತ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು ಬೆಂಗಳೂರಿನಲ್ಲಿದ್ದು ಎರಡನೇ ಮಹಾಸಭೆಯನ್ನು ನಡೆಸುತ್ತಿವೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಕೆಲವು ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆಯಿದೆ.

ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಸೋನಿಯಾ ಗಾಂಧಿ ಅವರು ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಾದೇಶಿಕ ಪಕ್ಷಗಳೊಂದಿಗೆ ಸೀಟು ಹಂಚಿಕೆ ಮತ್ತು ಸಾಮಾನ್ಯ ಕಾರ್ಯತಂತ್ರಗಳನ್ನು ಸಿದ್ಧಪಡಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. 

ಸೋನಿಯಾ ಗಾಂಧಿಯವರ ಅನುಪಸ್ಥಿತಿಯು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವಲ್ಲಿ ಮತ್ತು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಹಿನ್ನಡೆಯಾಗಲಿದೆ.

15 ವರ್ಷಗಳ ಕಾಲ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರಿಗೆ ಮಿತ್ರಪಕ್ಷಗಳನ್ನು ಹೇಗೆ ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎನ್ನುವ ಕಲೆ ಚೆನ್ನಾಗಿಯೇ ತಿಳಿದಿದೆ. ಅವರ ಅಪಾರ ಅನುಭವವು ವಿರೋಧ ಪಕ್ಷಗಳು ಒಮ್ಮತಕ್ಕೆ ಬರಲು ಮತ್ತು ಲೋಕಸಭಾ ಚುನಾವಣೆಗೆ ಮಾರ್ಗಸೂಚಿ ರೂಪಿಸಲು ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ಸಮಾಜವಾದಿ ಪಕ್ಷ (ಎಸ್‌ಪಿ), ಆರ್‌ಜೆಡಿ ಮತ್ತು ಜೆಡಿಯು ಪ್ರಬಲವಾಗಿರುವ ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಸೀಟು ಹಂಚಿಕೆ ಕುರಿತಂತೆ ಕಾಂಗ್ರೆಸ್ ಮೃದು ಧೋರಣೆ ತಾಳಬೇಕಾಗುತ್ತದೆ. ಗುಜರಾತ್‌ನಲ್ಲಿ ನಡೆದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ 12ರಷ್ಟು ಮತ ಪಡೆದಿದ್ದ ಆಮ್ ಆದ್ಮಿ ಪಕ್ಷಕ್ಕೂ (ಎಎಪಿ) ಕೆಲವು ಸ್ಥಾನಗಳನ್ನು ನೀಡಲೇಬೇಕಿದೆ. ಪಂಜಾಬ್‌ನಲ್ಲಿ ಭರ್ಜರಿ ಜಯದೊಂದಿಗೆ ಎಎಪಿ ಸರ್ಕಾರವನ್ನೂ ಕೂಡ ರಚಿಸಿದೆ.

ಹೀಗಿರುವಾಗ, ಸಮಾವೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ಗೆ ಸಹಾಯ ಮಾಡುವ ನಿರೀಕ್ಷೆಯಿದೆ.

ಈಮಧ್ಯೆ, ಎಐಸಿಸಿ ವಕ್ತಾರ ಪವನ್ ಕೇರ ಅವರು ವಿರೋಧ ಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ದೊಡ್ಡ ಪಾತ್ರವನ್ನು ವಹಿಸುತ್ತಿರುವುದು ಬಿಜೆಪಿ ಮತ್ತು ಎನ್‌ಡಿಎಗೆ ಆತಂಕಕ್ಕೆ ಕಾರಣವಾಗಿದೆ. ಬಿಜೆಪಿ ಪಾಳಯದಲ್ಲಿ ಈಗಾಗಲೇ ಹತಾಶೆ ವ್ಯಕ್ತವಾಗುತ್ತಿದ್ದು, ದೇಶದ ಜನರು ಈ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com