'INDIA' ಸಮಾವೇಶದಲ್ಲಿ ಸರ್ಕಾರಿ ಅಧಿಕಾರಿಗಳ ಭಾಗವಹಿಸುವಿಕೆ: ಸರ್ಕಾರದ ವಿವರಣೆ ಕೇಳಲು ಬಿಜೆಪಿ-ಜೆಡಿಎಸ್ ರಾಜ್ಯಪಾಲರಿಗೆ ಒತ್ತಾಯ

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಾಜಕೀಯ ನಾಯಕರನ್ನು ಸ್ವಾಗತ ಮಾಡಲು ಕೆಲವು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳುವಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ಗುರುವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನು ಬಹಿ
ವಿರೋಧ ಪಕ್ಷಗಳನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಹಾಗೂ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವ ಅಸಂವಿಧಾನಿಕ ನಡೆಯ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಜೆಪಿ ಜೆಡಿಎಸ್ ಶಾಸಕರು ಭೇಟಿ ಮಾಡಿ ಮನವಿ ಸಲ್ಲಿಸಿದರು.
ವಿರೋಧ ಪಕ್ಷಗಳನ್ನು ಹತ್ತಿಕ್ಕುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಹಾಗೂ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವ ಅಸಂವಿಧಾನಿಕ ನಡೆಯ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಜೆಪಿ ಜೆಡಿಎಸ್ ಶಾಸಕರು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಾಜಕೀಯ ನಾಯಕರನ್ನು ಸ್ವಾಗತ ಮಾಡಲು ಕೆಲವು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳುವಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ಗುರುವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನು ಬಹಿಷ್ಕರಿಸಿ ರಾಜ್ಯಪಾಲರನ್ನು ಭೇಟಿ ಮಾಡಿದರು. 

ಮೊನ್ನೆ ಬುಧವಾರ ವಿಧಾನಸಭೆಯಲ್ಲಿ ಸರ್ಕಾರದ ನಿರ್ಧಾರದ ಬಗ್ಗೆ ಗದ್ದಲ ಉಂಟಾದ ನಂತರ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿದ್ದಾರೆ.

ಅಧಿಕಾರಿಗಳ ಸ್ಥಾನಮಾನವನ್ನು ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಪ್ರೋಟೋಕಾಲ್ ಗೆ ಇಳಿಸುವುದನ್ನು ನಿಲ್ಲಿಸಲು ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡುವಂತೆ ಶಾಸಕರು ರಾಜ್ಯಪಾಲರಿಗೆ ಮನವಿ ಮಾಡಿದರು. ಬಿಜೆಪಿ ಶಾಸಕಾಂಗ ಪಕ್ಷದ ಲೆಟರ್‌ಹೆಡ್ ಅಡಿಯಲ್ಲಿರುವ ಜ್ಞಾಪಕ ಪತ್ರಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಇತರ ಜೆಡಿಎಸ್ ಶಾಸಕರು ಸಹಿ ಹಾಕಿದ್ದು, ಬಿಜೆಪಿ ನಾಯಕರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

ನಿನ್ನೆ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಯವರ ಉತ್ತರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌ನ ಬಹುತೇಕ ಶಾಸಕರು ಮತ್ತು ಎಂಎಲ್‌ಸಿಗಳು ಸದನದ ಕಲಾಪವನ್ನು ಬಹಿಷ್ಕರಿಸಿದರು. ಬಹುಶಃ ಮೊದಲ ಬಾರಿಗೆ ಬಜೆಟ್ ಮೇಲಿನ ಚರ್ಚೆಗೆ ಸಿಎಂ ಉತ್ತರ ನೀಡುವಾಗ ಪ್ರತಿಪಕ್ಷಗಳ ಪೀಠಗಳು ಖಾಲಿಯಾಗಿದ್ದವು. ಇಂದು ಕೂಡ ಬಿಜೆಪಿ-ಜೆಡಿಎಸ್ ನಾಯಕರು ಕಲಾಪವನ್ನು ಬಹಿಷ್ಕರಿಸುವ ಸಾಧ್ಯತೆಯಿದೆ.

ಬಿಜೆಪಿ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ರಾಜಭವನಕ್ಕೆ ಪಾದಯಾತ್ರೆ ನಡೆಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಎಚ್.ಡಿ.ರೇವಣ್ಣ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ.

ಇದಕ್ಕೂ ಮುನ್ನ ಸ್ಪೀಕರ್ ಯು.ಟಿ.ಖಾದರ್ ಮತ್ತು ಉಪಸಭಾಪತಿ ರುದ್ರಪ್ಪ ಲಮಾಣಿ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಸಭೆಯಲ್ಲಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.

ಇತ್ತೀಚೆಗೆ ನಡೆದ ವಿರೋಧ ಪಕ್ಷಗಳ ಸಮಾವೇಶದಲ್ಲಿ 25ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳು ಶಿಷ್ಟಾಚಾರ ಅಧಿಕಾರಿಗಳ ಕರ್ತವ್ಯ ನಿರ್ವಹಿಸಬೇಕಾಗಿರುವುದು ಆಘಾತಕಾರಿ ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ತಮ್ಮ ಜ್ಞಾಪಕ ಪತ್ರದಲ್ಲಿ ತಿಳಿಸಿದ್ದಾರೆ. ಇದು ಸಂವಿಧಾನ ಮತ್ತು ಕಾನೂನು ಸುವ್ಯವಸ್ಥೆಗೆ ವಿರುದ್ಧವಾಗಿತ್ತು. ಸರ್ಕಾರದ ಕ್ರಮವನ್ನು ಸಿಎಂ ಸಮರ್ಥಿಸಿಕೊಂಡಿರುವುದು ಬೇಸರ ತಂದಿದೆ.

ರಾಜ್ಯ ಸರ್ಕಾರದ ವೆಚ್ಚದಲ್ಲಿ ರಾಜಕಾರಣಿಗಳ ಪ್ರೋಟೋಕಾಲ್ ಅಧಿಕಾರಿಗಳಂತೆ ಕಾರ್ಯನಿರ್ವಹಿಸಲು ಐಎಎಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ.

ಸರ್ಕಾರಿ ಅಧಿಕಾರಿಗಳು ಅವರ ಘನತೆ, ಸ್ವಾಭಿಮಾನ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಬೇಕು, ದುರದೃಷ್ಟವಶಾತ್, ಕಾಂಗ್ರೆಸ್ ಅವರನ್ನು ಕೈಗೊಂಬೆಗಳಾಗಿ ಬಳಸುತ್ತಿದೆ. ಇದು ಪಕ್ಷ ಮತ್ತು ರಾಜ್ಯವನ್ನು ಒಂದಾಗಿ ವಿಲೀನಗೊಳಿಸಿದ ನಾಜಿ ಪಕ್ಷದಂತೆ. ಕಾಂಗ್ರೆಸ್ ಪ್ರಜಾಪ್ರಭುತ್ವದ ಅಡಿಪಾಯವನ್ನು ನಾಶಪಡಿಸುತ್ತದೆ ಎಂದು ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 
ಬುಧವಾರ ವಿಧಾನಸಭೆಯಲ್ಲಿ ನಡೆದ ಘಟನೆಗಳಿಗೆ ಸ್ಪೀಕರ್ ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದರು. ಖಾದರ್ ಅವರು ಸಭಾಧ್ಯಕ್ಷ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com