ಗ್ಯಾರಂಟಿ ಯೋಜನೆಗಳ ಜಾರಿಗೆ ಎಸ್ ಸಿ, ಎಸ್ ಟಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 
ಬಿಜೆಪಿ ನಾಯಕರ ಪ್ರತಿಭಟನೆ ಚಿತ್ರ
ಬಿಜೆಪಿ ನಾಯಕರ ಪ್ರತಿಭಟನೆ ಚಿತ್ರ
Updated on

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ ಸಿ, ಎಸ್ ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. 

10 ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ ಆಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಬರದೇ ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4,000ಕ್ಕೂ  ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಹೇಳಿದರು. 

ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ. ಪೊಲಿಸ್ ಠಾಣೆಯಲ್ಲಿ ಮಾಮೂಲು ಕೇಳುವ ಕೆಲಸ ಶುರುವಾಗಿದೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಒಂದು ಲಕ್ಷ ಮೂವತ್ತು ಸಾವಿರ ಕೋಟಿ ಸಾಲ ಮಾಡಿದ್ದಾರೆ‌.  ದಲಿತರ ಕಲ್ಯಾಣಕ್ಕಾಗಿ‌ ಮೀಸಲಿಟ್ಟ ಎಸ್ ಸಿಪಿ, ಟಿಎಸ್ ಪಿ ಹಣವನ್ನು ದುರ್ಬಳಕೆ  ಮಾಡಿಕೊಂಡಿದ್ದಾರೆ‌. ಗೃಹ ಲಕ್ಷ್ಮೀ ಯೋಜನೆಗೆ 6 ಸಾವಿರ ಕೋಟಿ ರೂ. ಎಸ್ ಸಿಪಿ ಟಿಎಸ್ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಗಳಿಗೆ 13,000 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿರುವ ದಲಿತ ಶಾಸಕರು ಹಾಗೂ ಸಚಿವರು ಏನು ಮಾಡುತ್ತಿಧ್ದಿರಿ. ಅದನ್ನು ಕೇಳಲು ದೈರ್ಯ ಇಲ್ಲವೆ ನರ ಇಲ್ಲವೇ ಎಂದು ಪ್ರಶ್ನಿಸಿದರು. 

 ಅಂಬೇಡ್ಕರ್ ಅವರ ಹೆಸರಿನಲ್ಲಿ ನಾವು 100 ಹಾಸ್ಟೇಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು, ಹಿಂದುಳಿದ ವರ್ಗದ ಹಾಸ್ಟೆಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು. ಅವುಗಳನ್ನು ನಿಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ. ನೀವು ದಲಿತರ ವಿರೋಧಿಗಳು ಎಂದು ಆರೋಪಿಸಿದರು.

ಭ್ರಷ್ಟಾಚಾರದಲ್ಲಿ ನಂಬರ್ ಒನ್: ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ನಂಬರ್ ಒನ್ ಅಂತ ವರದಿ ಬಂದಿದೆ. ಗುಮಾಸ್ತನಿಂದ ಹಿಡಿದು ಸೆಕ್ರೆಟರಿವರೆಗೂ ವರ್ಗಾವಣೆಗೆ ರೇಟ್ ಫಿಕ್ಸ್ ಮಾಡಿದ್ದೀರಿ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಐಎಫ್ ಎಸ್ ಅಧಿಕಾರಿ ನೇಮಕ ಮಾಡಬೇಕು‌. ಅದರ ಬದಲು ಸಂಬಂಧಿಕ ಅಂತ ಗುತ್ತಿಗೆ ನೌಕರರನ್ನು ಸೆಕ್ರೆಟರಿಯಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದರು.

ಸ್ಪೀಕರ್ ಅತ್ಯಂತ ಸಣ್ಣ ವಯಸ್ಸಿನಲ್ಲಿ ಸ್ಪೀಕರ್ ಆಗಿದ್ದೀರಿ. ನೀವು ಕಾಂಗ್ರೆಸ್ ಭೋಜನ ಕೂಟಕ್ಕೆ ತೆರಳಿ ಅವರ ಬಾಗಿಲು ಕಾದಿರಿ,ಇದರಿಂದ ನಿಮಗಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಅವಮಾನವಾಗಿದೆ. ನಾವು ಸದನದಲ್ಲಿ ಪ್ರತಿಭಟನೆ ಮಾಡಿದರೆ ಕರೆದು ಚಹಾ ಕೊಡಬೇಕಿತ್ತಾ ಅಂತ ಕೇಳಿದ್ದೀರಿ, ನಾವು ನಿಮ್ಮ ಚಹಾ ಕುಡಿಯಲು ಸದನಕ್ಕೆ ಬಂದಿಲ್ಲ. ನಾವು ಜನರ ಪರವಾಗಿ ಚರ್ಚೆ ಮಾಡಲು ಬರುತ್ತೇವೆ. ನಾವೇ ನಿಮಗೆ ಪ್ರತಿ ದಿನ ಟಿ ಕುಡಿಸುತ್ತೇವೆ‌‌ ಎಂದು ವಾಗ್ದಾಳಿ ನಡೆಸಿದರು. 

ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಜನಪ್ರೀಯತೆ‌ ಕಳೆದುಕೊಂಡಿದೆ. ಐದು ಜನ ಟೆರೆರಿಸ್ಟ್ ಗಳು ಸಿಕ್ಕಿದ್ದಾರೆ ಅವರನ್ನು ಟೆರೆರಿಸ್ಟ್ ಎನ್ನಲು ಆಗುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ‌‌. ಸಾಮನ್ಯ ಅಪರಾಧ ಮಾಡುವವರು ಹ್ಯಾಂಡ್ ಗ್ರ್ಯಾನೈಡ್ ಇಟ್ಡುಕೊಳ್ಳುತ್ತಾರಾ? ಇದೆಲ್ಲದಕ್ಕೂ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com