ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ಬಿಕೆ.ಹರಿಪ್ರಸಾದ್ ವಿರುದ್ಧ ಜಮೀರ್ ಅಹ್ಮದ್ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪಕ್ಷದ ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್.
ಸಚಿವ ಜಮೀರ್ ಅಹ್ಮದ್ ಖಾನ್.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪಕ್ಷದ ಹಿರಿಯ ನಾಯಕ ಮತ್ತು ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಶ್ರೀರಂಗಪಟ್ಟಣದ ಗುಂಬಜ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಾಗಲಿ ಹರಿಪ್ರಸಾದ್ ಆಗಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ಹುದ್ದೆಯನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆಯೇ ಹೊರತು ವಿಧಾನ ಪರಿಷತ್ತಿನ ಯಾವುದೇ ಸದಸ್ಯರಲ್ಲ ಎಂದು ಹೇಳಿದರು.

ಇದೇ ವೇಳೆ ಹರಿಪ್ರಸಾದ್ ಕಾಂಗ್ರೆಸ್ ನಾಯಕರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಕೂಡ ಇದೇ ಮಾತನ್ನು ಹೇಳಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಅವಶ್ಯಕತೆ ಇಲ್ಲ ಎಂದರು.

ಜೆಡಿಎಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾತನಾಡಿ, ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರ ಮಾತನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದೆನಿಸುತ್ತಿದೆ. ಗೌಡರು ಯಾವುದೇ ರಾಜಕೀಯ ಪಕ್ಷದೊಂದಿಗೆ ಜೆಡಿಎಸ್ ವಿಲೀನದ ಬಗ್ಗೆ ಮಾತನಾಡಿಲ್ಲ, ಬಿಜೆಪಿ-ಜೆಡಿಎಸ್ ವೈಯಕ್ತಿಕವಾಗಿ ಕಾಂಗ್ರೆಸ್ ಅನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೈತ್ರಿ ಬಗ್ಗೆ ಮಾತನಾಡುತ್ತಿದ್ದಾರೆ. ಪಂಚ ರತ್ನ ಅಥವಾ ಬಿಜೆಪಿಯ ಆಶ್ವಾಸನೆಗಳನ್ನ ನಂಬದ ಜನ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com