ಮುಖ್ಯಮಂತ್ರಿ ಚಂದ್ರು ನೇತೃತ್ವದ ಎಎಪಿ ರಾಜ್ಯ ಘಟಕದಿಂದ ಮಾಜಿ ಪಿಎಂ ಎಚ್.ಡಿ ದೇವೇಗೌಡರ ಭೇಟಿ

ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದ್ದಾರೆ.
ಎಎಪಿ ರಾಜ್ಯ ಘಟಕದಿಂದ ದೇವೇಗೌಡರ ಭೇಟಿ
ಎಎಪಿ ರಾಜ್ಯ ಘಟಕದಿಂದ ದೇವೇಗೌಡರ ಭೇಟಿ
Updated on

ಬೆಂಗಳೂರು: ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದ್ದಾರೆ.

ಜುಲೈ 26 ರ ಸಂಜೆ ದೇವೇಗೌಡರ ಮನೆಗೆ ತೆರಳಿದ ಮುಖ್ಯಮಂತ್ರಿ ಚಂದ್ರು ನೇತೃತ್ವದ ಆಮ್ ಆದ್ಮಿ ಪಕ್ಷದ ಮುಖಂಡರು ದೆಹಲಿ ಸರ್ಕಾರದ ಪರ ನಿಲ್ಲಲು ಕೋರಿದ್ದಾರೆ . ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೌಹಾರ್ದಯುತ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ನೀವು ದನಿಗೂಡಿಸಬೇಕೆಂದು ಮನವಿ ಮಾಡಿದರು. ಹಾಗೆಯೇ ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ, ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಜಗದೀಶ್ ವಿ ಸದಂ, ದರ್ಶನ್ ಜೈನ್, ಬಸವರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com