
ಉಡುಪಿ: ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದ ಉಡಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು, ಜಿ. ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟ. ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಇಡಲು ಹಿಂಜರಿಯುವುದಿಲ್ಲ ಎಂದರು.
ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರು ಕಿವುಡ ಹಾಗೂ ಮೂಕರಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ಪರಮೇಶ್ವರ್ ಅವರು ಈ ಪ್ರಕರಣವನ್ನು ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಯಶ್‌ಪಾಲ್ ಸುವರ್ಣ ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Advertisement