ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೊಡಕ್ಕಾಗಲ್ಲ ಹೇಳಿಕೆ: ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ವಾಗ್ದಾಳಿ

ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಜನರಿಗೆ ದ್ರೋಹ ಮಾಡುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಐಟಿ ಇಲಾಖೆ ಉಸ್ತುವಾರಿ ಅಮಿತ್ ಮಾಳವೀಯ ಅವರು ಕೂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ನಾವು ಈ ವರ್ಷ 40,000 ಕೋಟಿ ಮೀಸಲಿಡಬೇಕಾಗಿತ್ತು (5 ಭರವಸೆಗಳಿಗೆ) ಈ ವರ್ಷ ನಾವು ಅಭಿವೃದ್ಧಿ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಕರ್ನಾಟಕವನ್ನು ಹಾಳುಮಾಡುತ್ತದೆ. 5 ಭರವಸೆಗಳು ಜಾರಿಯಾಗುವ ಲಕ್ಷಣವಿಲ್ಲ. ಈಗ ಅಭಿವೃದ್ಧಿಯೂ ಇಲ್ಲ, ಶಾಸಕರಿಗೂ ಬೆಲೆ ಇಲ್ಲದಂತಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com