ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ಬೆಂಗಳೂರು ಹೈಗ್ರೌಂಡ್ಸ್ ಪೊಲೀಸರು ವಶಕ್ಕೆ ಪಡೆದು ನಂತರ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
‘ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೇ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ?’ ಎಂದು ಶಕುಂತಲಾ ಪ್ರಶ್ನಿಸಿದ್ದರು.
ಈ ಸಂಬಂಧ ತುಮಕೂರಿನಲ್ಲಿ ಅವರನ್ನು ವಶಕ್ಕೆ ಪಡೆದ ನಂತರ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ಶಕುಂತಲಾ ನಟರಾಜ್ ತಪ್ಪೊಪ್ಪಿಕೊಂಡಿದ್ದು, ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
Advertisement