ಅಧಿವೇಶನ ಮುಗಿದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದು ದುರಂತ: ಲಕ್ಷ್ಮಣ ಸವದಿ

ಅಧಿವೇಶನ ಮುಗಿದರೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ.
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ

ಬೆಳಗಾವಿ: ಅಧಿವೇಶನ ಮುಗಿದರೂ ರಾಷ್ಟ್ರೀಯ ಪಕ್ಷವಾದ ಬಿಜೆಪಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ. ಇಂಥದ್ದೊಂದು ಬೆಳವಣಿಗೆ ನಡೆದಿರುವುದು ಇತಿಹಾಸದಲ್ಲಿ ಇದೇ ಮೊದಲು. ಇಂತಹ ಇತಿಹಾಸವನ್ನು ಬಿಜೆಪಿಯವರು ಬರೆಯುತ್ತಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.

ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸುವುದು ವಾಡಿಕೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ರಾಜ್ಯ ಕಾಂಗ್ರೆಸ್‌ ನಾಯಕರ ಸಭೆ ಕರೆದಿದ್ದರಿಂದ ಶಾಸಕಾಂಗ ಪಕ್ಷದ ಸಭೆ ಮುಂದಕ್ಕೆ ಹೋಗಿತ್ತು. ಈಗ ಮತ್ತೆ ಸಭೆ ಕರೆಯಬೇಕಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಸಿ.ಟಿ.ರವಿ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ‘ಅವರು ಯಾರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎಂಬ ಅವಶ್ಯಕತೆ ನಮಗಿಲ್ಲ. ಒಂದುವೇಳೆ ರವಿ ಅಧ್ಯಕ್ಷರಾದರೆ ದುರ್ದೈವದ ಸಂಗತಿ. ಗೆಳೆತನಕ್ಕೂ ಮತ್ತು ಪಕ್ಷಕ್ಕೂ ವ್ಯತ್ಯಾಸವಿರುತ್ತದೆ. ಒಂದು ರವಿ ಅಧ್ಯಕ್ಷರಾಗಿ, ಆ ಪಕ್ಷದಲ್ಲಿ ಬೆಳೆಯುತ್ತಾನೆ ಎಂದರೆ ಶುಭಕೋರುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com