ಲೋಕಸಭೆ ಚುನಾವಣೆಯಲ್ಲಿ ಜಾತಿ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಕರ್ನಾಟಕದಲ್ಲಿ ಮೈತ್ರಿ: ಬಿಎಸ್ ಪಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಸಿದ್ದಾರ್ಥ್ ಅವರು ಗುರುವಾರ ಇಲ್ಲಿ ಬಿಎಸ್‌ಪಿಯ ಕರ್ನಾಟಕ ಘಟಕದ ಮುಖಂಡರೊಂದಿಗೆ ಸಭೆ ನಡೆಸಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಸಿದ್ದಾರ್ಥ್ ಅವರು ಗುರುವಾರ ಇಲ್ಲಿ ಬಿಎಸ್‌ಪಿಯ ಕರ್ನಾಟಕ ಘಟಕದ ಮುಖಂಡರೊಂದಿಗೆ ಸಭೆ ನಡೆಸಿದರು.

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಜಿಲ್ಲಾವಾರು ಚುನಾವಣೋತ್ತರ ಸಮೀಕ್ಷೆಯನ್ನು ಮೌಲ್ಯಮಾಪನ ಮಾಡಲು ನಡೆಸಲಾಗುವುದು ಎಂದು ಹೇಳಿದರು. ಪಕ್ಷದ ದೌರ್ಬಲ್ಯಗಳು, ಮತ್ತು ಅದರ ಪ್ರಕಾರ 2024 ರಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಮಾಡುವುದಾಗಿ ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಿದ್ದಾರ್ಥ್, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ದಲಿತರು ಮತ್ತು ಮುಸ್ಲಿಮರಿಗೆ ಕಾಂಗ್ರೆಸ್  ಅವಕಾಶ ನಿರಾಕರಿಸಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೊತೆಗೆ ಪಕ್ಷವು ಈ ಸಮುದಾಯದ ನಾಯಕರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಬಿಎಸ್‌ಪಿ ಸೋಲಿನ ನಂತರ ಪಕ್ಷದ ರಾಜ್ಯ ನಾಯಕತ್ವವು ತನ್ನ ಧೋರಣೆಯನ್ನು ಬದಲಾಯಿಸಿದೆ ಮತ್ತು ಈಗ ಚಾಮರಾಜನಗರ, ಮೈಸೂರು, ಹಾಸನ, ವಿಜಯಪುರ, ರಾಯಚೂರು, ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ನಾವು ಆಗಾಗ್ಗೆ  ಸಭೆಗಳನ್ನು ನಡೆಸುತ್ತೇವೆ ಮತ್ತು ಜಾತಿ ಮತ್ತು ಜನಸಂಖ್ಯೆಯ ಆಧಾರದ ಮೇಲೆ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು, ನಿರ್ಧಾರವು ಬಿಎಸ್ಪಿ ವರಿಷ್ಠೆ ಮಾಯಾವತಿ ಅವರ ನಿರ್ದೇಶನವನ್ನು ಅವಲಂಬಿಸಿರುತ್ತದೆ ಎಂದು ಹೇಳಿದ್ದಾರೆ.

ಬಿಎಸ್‌ಪಿಯ ನೂತನ ಕಾರ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಕಠಿಣ ಹೋರಾಟ ನೀಡಲು ಶ್ರಮಿಸುತ್ತದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಯಾವುದೇ ದಲಿತ ವಿರೋಧಿ ಅಥವಾ ಅಲ್ಪಸಂಖ್ಯಾತ ವಿರೋಧಿ ನಿಲುವು ಕೈಗೊಂಡರೆ ಅದರ  ವಿರುದ್ಧ ಧ್ವನಿ ಎತ್ತುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com