ಎಂ.ಬಿ ಪಾಟೀಲ್
ಎಂ.ಬಿ ಪಾಟೀಲ್

ದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ' ಹೆಲ್ಪ್​​ಲೈನ್ ಆರಂಭಿಸಿ: ಸಿಎಂಗೆ ಎಂ.ಬಿ.ಪಾಟೀಲ್‌ ಮನವಿ

ರಾಜ್ಯದಲ್ಲಿ ಯಾವುದೇ ರೀತಿಯ ದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ’ ಎಂಬ ಹೊಸ ಹೆಲ್ಪ್​​ಲೈನ್ ಆರಂಭಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ’ ಎಂಬ ಹೊಸ ಹೆಲ್ಪ್​​ಲೈನ್ ಆರಂಭಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಂ.ಬಿ.ಪಾಟೀಲ್ ಅವರು, ರಾಜ್ಯದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅಂತಹ ಅನಪೇಕ್ಷಿತ ಘಟನೆಗಳ ಬಗ್ಗೆ ಕಣ್ಗಾವಲು ಇಡುವ ನಿಟ್ಟಿನಲ್ಲಿ 'ಶಾಂತಿಯುತ ಕರ್ನಾಟಕ' ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸಿ ಎಂದು ಮನವಿ ಮಾಡಿದ್ದಾರೆ.

ನಮ್ಮ ಗುರಿ ಅಭಿವೃದ್ಧಿ, ಪ್ರಗತಿ ಮತ್ತು 'ಬ್ರಾಂಡ್ ಕರ್ನಾಟಕ' ರಕ್ಷಿಸುವುದು ಎಂದು ಟ್ವೀಟ್ ಮಾಡಿರುವ ಸಚಿವರು, ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಟ್ಯಾಗ್ ಮಾಡಿದ್ದಾರೆ.

ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದನ್ನು ತಡೆಯಲು ಬಿಜೆಪಿ ಸಹಾಯವಾಣಿಯನ್ನು ಆರಂಭಿಸಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ಮತ್ತು ಭಾರತೀಯ ಜನತಾ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ ಬೆನ್ನಲ್ಲೇ ಸಚಿವ ಎಂ.ಬಿ. ಪಾಟೀಲ್ ಅವರು 'ಶಾಂತಿಯುತ ಕರ್ನಾಟಕ' ಸಹಾಯವಾಣಿಗೆ ಮನವಿ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com