ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ನಿರ್ಧಾರ: ಡಿಕೆ ಸುರೇಶ್ ಗೆ ರಾಜಕೀಯ ವೈರಾಗ್ಯ?

ನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ.
ಡಿ.ಕೆ ಸುರೇಶ್
ಡಿ.ಕೆ ಸುರೇಶ್
Updated on

ತುಮಕೂರು: ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ.

ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಂಸದ ಡಿ.ಕೆ ಸುರೇಶ್​. ಕೆಲವರು ನನ್ನ ಲೋಕಸಭಾ ಚುನಾವಣೆ ಸರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಸ್ಪರ್ಧಿಸುತ್ತೇನೋ ಇಲ್ಲವೋ ಇನ್ನು ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

ಆದರೆ ಸಂಸದರ ಹೇಳಿಕೆ ಈಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮತ್ತೊಂದೆಡೆ ಡಿ.ಕೆ ಸುರೇಶ್​ ಅವರಿಗೆ ರಾಜಕಾರಣ ಸಾಕಾಗಿ ಹೋಗಿದ್ಯಾ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿ ಹುಟ್ಟಿಕೊಂಡಿದೆ. ಮಾತ್ರವಲ್ಲದೆ, ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿದೆ.

ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com