ಸಂಸದ ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆ ಇಲ್ಲ; ಹೊಂದಾಣಿಕೆ ಮಾಡಿಕೊಂಡವರ ಹೆಸರು ಬಹಿರಂಗಪಡಿಸಲಿ: ಸಿದ್ದರಾಮಯ್ಯ

ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನ ಕೆಲವು ಪ್ರಮುಖ ನಾಯಕರ ಮಧ್ಯೆ ಹೊಂದಾಣಿಕೆ ರಾಜಕೀಯ(Adjustment politics) ನಡೆಯುತ್ತಿದೆ ಎಂಬ ಬಗ್ಗೆ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಸಿ ಟಿ ರವಿ ನೀಡಿರುವ ಹೇಳಿಕೆ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 
ಸಿಎಂ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹ
ಸಿಎಂ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹ
Updated on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನ ಕೆಲವು ಪ್ರಮುಖ ನಾಯಕರ ಮಧ್ಯೆ ಹೊಂದಾಣಿಕೆ ರಾಜಕೀಯ(Adjustment politics) ನಡೆಯುತ್ತಿದೆ ಎಂಬ ಬಗ್ಗೆ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಸಿ ಟಿ ರವಿ ನೀಡಿರುವ ಹೇಳಿಕೆ ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 

ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ರಾತ್ರಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಈ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಹೊಂದಾಣಿಕೆ ರಾಜಕಾರಣ ಮಾಡುತ್ತಿರುವುದು ಯಾರು? ಸಂಸದ ಪ್ರತಾಪ್ ಸಿಂಹ ಎಳಸು ಮನುಷ್ಯ, ಆತನಿಗೆ ರಾಜಕೀಯ ಪ್ರಬುದ್ಧತೆ ಇಲ್ಲ. ಮೈಸೂರು-ಬೆಂಗಳೂರು ಹೈವೇ ಮಾಡಿಸಿದ್ದು ನಾನೇ ಅಂತಾನೆ, ಅವನೇನು ಅಲ್ಲಿ ಸಂಸದನಾ, ಅವನು ಹೇಳಿದ ತಕ್ಷಣ ತನಿಖೆ ನಡೆಸಲು ಆಗುತ್ತದಾ, ಹೊಂದಾಣಿಕೆ ಮಾಡಿಕೊಂಡಿರುವ ಬಿಜೆಪಿ ನಾಯಕರು ಯಾರು ಎಂದು ಪ್ರತಾಪ್ ಸಿಂಹ ಹೇಳಲಿ ಎಂದು ತಿರುಗೇಟು ನೀಡಿದರು.

ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com