ಅಖಿಲೇಶ್ ಯಾದವ್​ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ: ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ

ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಅಖಿಲೇಶ್ ಯಾದವ್​ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಖಿಲೇಶ್ ಯಾದವ್​ ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ
Updated on

ಲಖನೌ: ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಲಖನೌದ ಅಖಿಲೇಶ್ ಯಾದವ್ ಅವರ ನಿವಾಸದಲ್ಲಿ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅತ್ಯಂತ ವಿಶ್ವಾಸಪೂರ್ವಕ ಹಾಗೂ ಸಹೋದರ ವಾತ್ಸಲ್ಯದೊಂದಿಗೆ ನಡೆದ ಈ ಭೇಟಿಯ ಸಂದರ್ಭದಲ್ಲಿ ಲೋಕಸಭೆ ಚುನಾವಣೆಯೂ ಸೇರಿದಂತೆ ಭವಿಷ್ಯದ ರಾಜಕೀಯ ಬೆಳವಣಿಗೆಗಳ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಲಾಯಿತು ಎಂದರು.

ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಕುಟುಂಬ ವಿಶೇಷ ಬಾಂಧವ್ಯ ಹೊಂದಿದ್ದಾರೆ. ಈ ಬಗ್ಗೆ ವಿಶೇಷವಾಗಿ ತಮ್ಮ ನೆನಪುಗಳನ್ನು ಅಖಿಲೇಶ್ ಯಾದವ್ ಅವರು ಮೆಲುಕು ಹಾಕಿದರು. ಮುಖ್ಯವಾಗಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇಮವನ್ನು ವಿಚಾರಿಸಿದರು ಎಂದು ನಿಖಿಲ್ ತಿಳಿಸಿದರು.

ಮೂಲತಃ ಮೈಸೂರು ನಗರದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅಖಿಲೇಶ್ ಅವರು ಅಂದಿನ ದಿನಗಳನ್ನು ಸ್ಮರಿಸಿಕೊಂಡರು. ಕರ್ನಾಟಕ, ಕನ್ನಡಿಗರ ಬಗ್ಗೆ ತಮಗಿರುವ ಅಪಾರ ಗೌರವ, ಆದರಾಭಿಮಾನವನ್ನು ಹೃದಯಪೂರ್ವಕವಾಗಿ ವ್ಯಕ್ತಪಡಿಸಿದರು. ಅವರ ವಿಶ್ವಾಸ, ಪ್ರೀತಿಗೆ ನಾನು ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ನಿಖಿಲ್ ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಹಾಗೂ ರಾಷ್ಟ್ರ ಮಟ್ಟದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಾಕಷ್ಟು ವಿಷಯಗಳನ್ನು ಅಖಿಲೇಶ್ ಅವರು ಚರ್ಚೆ ಮಾಡಿದ್ದು, ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಎದುರಿಸುವ ಬಗ್ಗೆ ಅಖಿಲೇಶ್ ಅವರು ತಮ್ಮದೇ ಆದ ವಿಶೇಷ ಕಾರ್ಯಸೂಚಿ ರೂಪಿಸಿಕೊಂಡಿದ್ದಾರೆ. ಈಗಿನಿಂದಲೇ ಚುನಾವಣೆಯ ಸಿದ್ಧತೆಗಳನ್ನು ಭರದಿಂದ ನಡೆಸಿದ್ದಾರೆ. ಜತೆಗೆ, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ನನ್ನ ಜೊತೆ ಕೂಲಂಕಷವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com