ಕಾಂಗ್ರೆಸ್ "ಹೊಸ ಮುಸ್ಲಿಂ ಲೀಗ್": ಮತಾಂತರ ನಿಷೇಧ ಕಾನೂನು ರದ್ದತಿಗೆ ಬಿಜೆಪಿ ಕಿಡಿ

ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾನೂನು ರದ್ದುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದ್ದು, ಸರ್ಕಾರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ...
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾನೂನು ರದ್ದುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದ್ದು, ಸರ್ಕಾರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ ಬಿಜೆಪಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪಕ್ಷ "ಹೊಸ ಮುಸ್ಲಿಂ ಲೀಗ್" ಎಂದು ಕರೆದಿದೆ.

ರಾಹುಲ್ ಗಾಂಧಿ ಅವರ "ಮೊಹಬ್ಬತ್ ಕಿ ದುಕಾನ್" ಇದೇನಾ?" ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್(ಯತ್ನಾಳ್) ಅವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಹಿಂದೂ ವಿರೋಧಿ ಅಜೆಂಡಾ" ಈಗ ಬಹಿರಂಗವಾಗಿದೆ. ಹಿಂದೂಗಳು ನಾಶವಾಗಬೇಕೆಂದು ನೀವು ಬಯಸುತ್ತೀರಾ? ಬಿಜೆಪಿ ಜಾರಿಗೆ ತಂದ ‘ಮತಾಂತರ ನಿಷೇಧ ಕಾನೂನನ್ನು’ ಹಿಂಪಡೆಯಲು ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಮೇಲೆ ಮತಾಂತರ ಮಾಫಿಯಾ ಪ್ರಭಾವ ಬೀರಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ "ಮತಾಂತರ ಮಾಫಿಯಾ" ಪ್ರಭಾವ "ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ, ಬಿಜೆಪಿ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾನೂನನ್ನು ರದ್ದುಗೊಳಿಸುತ್ತಿದೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.

"ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್ ಆಗಿದ್ದು, ಅದು ಹಿಂದೂಗಳನ್ನು ನೋಯಿಸಲು ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತದೆ" ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com