ಅಕ್ಕಿ ಖರೀದಿ ವಿಚಾರದಲ್ಲಿ ಸುಳ್ಳು ಆರೋಪ ಮಾಡಿ ರಾಜ್ಯ ಸರ್ಕಾರ ಜನರನ್ನು ತಪ್ಪುದಾರಿಗೆಳೆಯುತ್ತಿದೆ: ತೇಜಸ್ವಿ ಸೂರ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡುವುದನ್ನು ನಿಲ್ಲಿಸಿದೆ ಎಂದು ಉದ್ದೇಶಪೂರ್ವಕವಾಗಿ ನಿಯಮಗಳನ್ನು ತಿರುಚಿ ಸುಳ್ಳು ಸುದ್ದಿ ಹಬ್ಬಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ತಪ್ಪುಹಾದಿಗೆಳೆಯುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ(ಸಂಗ್ರಹ ಚಿತ್ರ)
ಸಂಸದ ತೇಜಸ್ವಿ ಸೂರ್ಯ(ಸಂಗ್ರಹ ಚಿತ್ರ)

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡುವುದನ್ನು ನಿಲ್ಲಿಸಿದೆ ಎಂದು ಉದ್ದೇಶಪೂರ್ವಕವಾಗಿ ನಿಯಮಗಳನ್ನು ತಿರುಚಿ ಸುಳ್ಳು ಸುದ್ದಿ ಹಬ್ಬಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನರನ್ನು ತಪ್ಪುಹಾದಿಗೆಳೆಯುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಡ್ಡಿಪಡಿಸುವ ಮೂಲಕ ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ ಕೂಡ ಆಪಾದಿಸಿದ್ದಾರೆ. 
ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ನಿಯಮಗಳು ಮತ್ತು ನಿಬಂಧನೆಗಳನ್ನು ತಿರುಚುವ ಮೂಲಕ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಡಚಣೆಯಾಗುತ್ತಿದೆ ಎಂದು ಸಹ ತೇಜಸ್ವಿ ಸೂರ್ಯ ಆರೋಪಿಸಿದರು.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾಧ್ಯಮ ವರದಿಗಳ ಪ್ರಕಾರ, ಭಾರತೀಯ ಆಹಾರ ನಿಗಮದ ಸ್ಥಳೀಯ ಕಚೇರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡುವಂತೆ ಮನವಿ ಸಲ್ಲಿಸುವ ಮೊದಲೇ ಜೂನ್ 8ರಂದು ವಿಶೇಷ ಅಂತರ ಸಚಿವಾಲಯ ಸಭೆ ನಡೆಸಲಾಗಿದೆ. ಅಕ್ಕಿ ನೀಡಲಾಗುವುದು ಎಂದು ನಿಗಮದ ಸ್ಥಳೀಯ ಅಧಿಕಾರಿಗಳು ಹೇಳುವ ಕೆಲವು ದಿನಗಳ ಮೊದಲೇ ಸಭೆ ನಡೆಸಲಾಗಿತ್ತು. 

.ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವಂತೆ ಭಾರತೀಯ ಆಹಾರ ನಿಗಮ(FCI) ಹಾಗೂ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಕೂಡಲೇ ಎಫ್‌ಸಿಐನ ಪ್ರಾದೇಶಿಕ ಕಚೇರಿ ನಮಗೆ ಅನುಮತಿ ಇದೆ ಎಂದು ಪತ್ರ ಬರೆದಿದೆ. ಆಗ ಕೇಂದ್ರ ಸರ್ಕಾರ ಸಭೆ ನಡೆಸಿ ನಿಯಮ ಬದಲಿಸಿ ಹೆಚ್ಚುವರಿ ಅಕ್ಕಿ ನೀಡುವುದಿಲ್ಲ ಎಂದು ಹೇಳಿದೆ ಎಂದು ಸರ್ಕಾರದ ನಾಯಕರು ಆರೋಪಿಸುತ್ತಿದ್ದಾರೆ. ಇನ್ನೊಂದೆಡೆ ಖಾಸಗಿ ಖರೀದಿಗೆ ಅನುಮತಿ ನೀಡಿ ರಾಜ್ಯ ಸರ್ಕಾರದಿಂದ ಖರೀದಿ ಸ್ಥಗಿತಗೊಳಿಸಲಾಗಿದೆ ಎಂದು ಮತ್ತೊಂದು ಆರೋಪವನ್ನು ಕೂಡ ರಾಜ್ಯ ಸರ್ಕಾರ ಸುಖಾಸುಮ್ಮನೆ ಮಾಡುತ್ತಿದೆ ಎಂದು ತೇಜಸ್ವಿ ಸೂರ್ಯ ಹರಿಹಾಯ್ದರು.

ಇಂದು ಪ್ರಕಟವಾದ ಮಾಧ್ಯಮ ವರದಿಯ ಪ್ರಕಾರ, ಜೂನ್ 8 ರಂದು ದೆಹಲಿಯಲ್ಲಿ ವಿಶೇಷ ಅಂತರ ಸಚಿವಾಲಯ ಸಭೆ ನಡೆಸಲಾಗಿದೆ. ರಾಜ್ಯ ಸರ್ಕಾರವು ಎಫ್‌ಸಿಐ ಪ್ರಾದೇಶಿಕ ಕಚೇರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ನೀಡುವಂತೆ ವಿನಂತಿ ಮಾಡಿದಾಗ ಅಕ್ಕಿ ಪಡೆಯಲು ಅವಕಾಶ ಇದೆ ಎಂದು ಎಫ್ ಸಿಐ ಪ್ರಾದೇಶಿಕ ಅಧಿಕಾರಿ ಹೇಳುವ ಕೆಲ ದಿನಗಳ ಹಿಂದೆ ಸಭೆ ನಡೆಸಲಾಗಿತ್ತು. 

ಮಂಡಿಗಳಲ್ಲಿ ಗೋಧಿ ದರ ಶೇ.8ರಷ್ಟು ಏರಿಕೆಯಾಗಿರುವುದು ಬೆಳಕಿಗೆ ಬಂದಿದೆ. ಬಡವರನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು ಮತ್ತು ದಾಸ್ತಾನುದಾರರು ಎಷ್ಟು ಗೋಧಿ ಮತ್ತು ಅಕ್ಕಿ ಸಂಗ್ರಹಿಸಬಹುದು ಎಂಬುದಕ್ಕೆ ಮಿತಿ ಹಾಕಲು ಚರ್ಚಿಸಲಾಗಿದೆ ಎಂದು ಅವರು ಹೇಳಿದರು. 

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಮೇ 2 ರಂದು ನಡೆದ ಸಭೆಯಲ್ಲಿ, ಸಭೆಯ ಅಧ್ಯಕ್ಷತೆ ವಹಿಸಿ ಕ್ಯಾಬಿನೆಟ್ ಕಾರ್ಯದರ್ಶಿ ಹಣದುಬ್ಬರವನ್ನು ನಿಯಂತ್ರಿಸಲು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಬಗ್ಗೆ ಸೂಚಿಸಿದ್ದರು. ಇದು ಕಾಂಗ್ರೆಸ್ ಸರ್ಕಾರದ ಯೋಜನೆಯನ್ನು ಹತ್ತಿಕ್ಕಲು ಮಾಡಿದ ತಿದ್ದುಪಡಿಯಲ್ಲ ಎಂದು ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com