"ಕಾಮಿಡಿ ಕಿಲಾಡಿ" ಖ್ಯಾತಿಯ ಕಟೀಲ್ ಅಧ್ಯಕ್ಷಗಿರಿಯನ್ನು ಸಂತೋಷ್ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದಾರೆ- ಕಾಂಗ್ರೆಸ್ ಟೀಕೆ

ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
Updated on: 

ಬೆಂಗಳೂರು: ಡಾ. ಜಿ. ಪರಮೇಶ್ವರ್ ತಮ್ಮ ಗೃಹ ಖಾತೆಯನ್ನು ಮರಿ ಖರ್ಗೆಗೆ ಲೀಸ್ ಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣನಾದ ನಾಮಕಾವಸ್ಥೆ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕನಿಷ್ಠ ಕಾಮನ್ ಸೆನ್ಸ್ ಇಲ್ಲ. ಇನ್ನು ಸಂಸದೀಯ ನಿಯಮಗಳ ಬಗ್ಗೆ ಅರಿವಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.

ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಉಸ್ತುವಾರಿ ಸಚಿವರು, ಅಲ್ಲಿನ ವ್ಯವಸ್ಥೆ ಸರಿಪಡಿಸುವುದು ಅವರ ಹೊಣೆಗಾರಿಕೆ.ಅಲ್ಲಿನ ಅಧಿಕಾರಿಗಳನ್ನು ಸರಿದಾರಿಗೆ ತರುವುದು ಅವರದ್ದೇ ಜವಾಬ್ದಾರಿ. ಇಷ್ಟು ಸಾಮಾನ್ಯ ತಿಳುವಳಿಕೆ ಇಲ್ಲದಿರುವುದಕ್ಕಾಗಿಯೇ ಕಟೀಲ್ ಅವರನ್ನು 'ಕಾಮಿಡಿ ಕಿಲಾಡಿ'' ಎನ್ನುವುದು ಎಂದು ಟಾಂಗ್ ನೀಡಿದೆ.

ಕಟೀಲ್ ಅವರೇ ತಾವು ಅಧ್ಯಕ್ಷಗಿರಿಯನ್ನು ಬಿಎಲ್ ಸಂತೋಷ್ ಅವರ ಪಾದರಕ್ಷೆಗಳಿಗೆ ಲೀಸ್ ಗೆ ಕೊಟ್ಟಿದ್ದೀರಿ ಎಂದ ಮಾತ್ರಕ್ಕೆ ಬೇರೆಲ್ಲರೂ ಹಾಗೆಯೇ ಎಂದು ತಿಳಿಯುವುದು ಮೂರ್ಖತನ ಎಂದು ಕಾಂಗ್ರೆಸ್ ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com