2024 ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ 6 ರಿಂದ 7 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಜಗದೀಶ್ ಶೆಟ್ಟರ್

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತರ ಕರ್ನಾಟಕದ 11 ಸ್ಥಾನಗಳಲ್ಲಿ 6ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ವಿಧಾನ ಪರಿಷತ್ ನ ನೂತನ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಹುಬ್ಬಳ್ಳಿ: 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತರ ಕರ್ನಾಟಕದ 11 ಸ್ಥಾನಗಳಲ್ಲಿ 6ರಿಂದ 7 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ವಿಧಾನ ಪರಿಷತ್ ನ ನೂತನ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಆಯ್ಕೆಯಾಗಿರುವ ಬಗ್ಗೆ ಘೋಷಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಏನೆಲ್ಲ ತಂತ್ರಗಾರಿಕೆ ಮಾಡಬೇಕೋ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಹೈಕಮಾಂಡ್ ಗೂ ಹೇಳಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com